
ಕೋಲಾರ(ಅ.27): ದೇಶದಲ್ಲೇ ಬಯಲು ಬಹಿರ್ದೆಸೆ ಮುಕ್ತ ಜಿಲ್ಲೆ ಎನಿಸಿಕೊಂಡಿರುವ ಕೋಲಾರ ಈಗ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿದೆ. ವಿದೇಶಿ ವಿದ್ಯಾರ್ಥಿಗಳು ಈ ಜಿಲ್ಲೆಗೆ ಭೇಟಿ ನೀಡಿ ಬಯಲುಮುಕ್ತ ವ್ಯವಸ್ಥೆಯನ್ನು ಪರಿಶೀಲಿಸಿದ್ರು.
ಕೋಲಾರ ತಾಲೂಕಿನ ಕೋಡಿ ರಾಮಸಂದ್ರ ಗ್ರಾಮಕ್ಕೆ ಭೇಟಿ ನೀಡಿದ 9 ದೇಶಗಳ 14 ಪ್ರತಿನಿಧಿಗಳು ಶೌಚಾಲಯ ನಿರ್ಮಾಣ ಪ್ರಗತಿ ಪರಿಶೀಲಿಸಿದ್ರು. ಹೈದರಾಬಾದ್ ರಾಷ್ಟ್ರೀಯ ಗ್ರಾಮೀಣ ಅಭಿವೃದ್ಧಿ ತರಬೇತಿ ಸಂಸ್ಥೆಗೆ ಅಧ್ಯಯನಕ್ಕೆಂದು ಆಗಮಿಸಿದ್ದರು. ಕರ್ನಾಟಕದ ಕೋಲಾರ ದೇಶದಲ್ಲೇ ಬಯಲುಮುಕ್ತ ಜಿಲ್ಲೆ ಎಂಬ ಖ್ಯಾತಿ ಗಳಿಸಿದ್ದನ್ನು ಕೇಳಿ ಕೋಲಾರಕ್ಕೆ ಭೇಟಿ ನೀಡಿದ್ದರು.
ಸ್ವಚ್ಛ ಭಾರತ ಅಭಿಯಾನವು ಜಗತ್ತಿನ ಮುಂದುವರಿಯುತ್ತಿರುವ ದೇಶಗಳಿಗೆ ಸ್ಫೂರ್ತಿಯ ಚಿಲುಮೆಯಾಗಿದೆ ಎಂದು ಈ ತಂಡ ಅಭಿಪ್ರಾಯಪಟ್ಟಿತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.