ಹೈದ್ರಾಬಾದ್ ಕರ್ನಾಟಕ ನಾಯಕಗೆ BSY ಸಂಪುಟದಲ್ಲಿ ಸಚಿವ ಸ್ಥಾನ?

Published : Aug 01, 2019, 02:00 PM ISTUpdated : Aug 01, 2019, 02:03 PM IST
ಹೈದ್ರಾಬಾದ್ ಕರ್ನಾಟಕ ನಾಯಕಗೆ BSY ಸಂಪುಟದಲ್ಲಿ ಸಚಿವ ಸ್ಥಾನ?

ಸಾರಾಂಶ

ಹೈದ್ರಾಬಾದ್ ಕರ್ನಾಟಕದ ಪ್ರಮುಖ ನಾಯಕಗೆ ಸಚಿವ ಸ್ಥಾನ ನೀಡಬೇಕೆಂದು ಆಗ್ರಹಿಸಲಾಗಿದೆ. ಎಲ್ಲಾ ಸಮುದಾಯದ ನಾಯಕರನ್ನು ಮುನ್ನಡೆಸುವ ಗುಣ ಹೊಂದಿದ ನಾಯಕಗೆ ಸಚಿವ ಸ್ಥಾನ ನೀಡಲು ಮನವಿ ಮಾಡಲಾಗಿದೆ. 

ಬೆಂಗಳೂರು [ಆ.01]: ಮಾಜಿ ಸಚಿವ ಬಾಬುರಾವ್ ಚಿಂಚನಸೂರ ಅವರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಂಪುಟದಲ್ಲಿ ಸಚಿವ ಸ್ಥಾನ ನೀಡಬೇಕು ಕೋಳಿ ಸಮುದಾಯದ ಮುಖಂಡರು ಆಗ್ರಹಿಸಿದ್ದಾರೆ. 

ಯಾದಗಿರಿಯಲ್ಲಿ ಕೋಲಿ ಸಮಾಜದ ಜಿಲ್ಲಾಧ್ಯಕ್ಷ ಹನುಮಂತ ರೆಡ್ಡಿ ಮಾತನಾಡಿ, ರಾಜ್ಯದಲ್ಲಿ ಕೋಲಿ ಸಮಾಜ 60 ಲಕ್ಷ ಜನಸಂಖ್ಯೆ ಹೊಂದಿದ್ದು, ಹೈದ್ರಾಬಾದ್  ಕರ್ನಾಟಕದಲ್ಲಿ ನಮ್ಮ ಸಮುದಾಯ ಹೆಚ್ಚಿನ ಜನರನ್ನು ಹೊಂದಿದ್ದು, ನಮ್ಮ ಸಮುದಾಯದ ನಾಯಕ ಗುರುಮಠಕಲ್ ಕ್ಷೇತ್ರದಿಂದ ಹಲವು ಬಾರಿ ಗೆಲುವು ಸಾಧಿಸಿದ್ದ ಮಾಜಿ ಸಚಿವ ಚಿಂಚನೂಸರ್ ಅವರಿಗೆ ಮತ್ತೊಮ್ಮೆ ಸಚಿವ ಸ್ಥಾನ ನೀಡಬೇಕು ಎಂದು ಆಗ್ರಹಿಸಿದ್ದಾರೆ.  

ಇಬ್ಬರಲ್ಲಿ ಯಾರಿಗೆ ಒಲಿಯುತ್ತೆ BSY ಸಂಪುಟದಲ್ಲಿ DCM ಸ್ಥಾನ?

ಎಲ್ಲ ವರ್ಗದ ಜನರನ್ನು ಮುನ್ನಡೆಸುವ ಗುಣವನ್ನು ಹೊಂದಿರುವ ಬಾಬುರಾವ್ ಅವರಿಗೆ ಈ ಬಾರಿಗೆ ಸಚಿವ ಸ್ಥಾನ ನೀಡಬೇಕೆಂದು ಮನವಿ ಮಾಡಿದರು.

ಕಾಂಗ್ರೆಸ್ ಅನರ್ಹ ಶಾಸಕರಿಗೆ BSY ಸಂಪುಟದಲ್ಲಿ ಸಚಿವ ಸ್ಥಾನ ಫಿಕ್ಸ್

ಸಂಸದ ಉಮೇಶ್ ಜಾಧವ್ ಅವರ ಗೆಲುವಿನಲ್ಲಿ ಬಾಬುರಾವ್ ಚಿಂಚನಸೂರ್ ಮಹತ್ತರ ಪಾತ್ರ ನಿರ್ವಹಿಸಿದ್ದರು. ಆದರೆ ಕಳೆದ ಬಾರಿ ಗುರುಮಠಕಲ್ ಕ್ಷೇತ್ರದಿಂದ ಸ್ಪರ್ಧಿಸಿ ಪರಾಭವಗೊಂಡಿದ್ದರು. ಈ ನಿಟ್ಟಿನಲ್ಲಿ ಚಿಂಚನಸೂರ್ ಅವರಿಗೆ ಪರಿಷತ್ ಸದಸ್ಯರನ್ನಾಗಿಸಿ ಸಚಿವ ಸ್ಥಾನ ನೀಡಬೇಕೆಂದು ಕೂಲಿ ಸಮಾಜದ ಜಿಲ್ಲಾಧ್ಯಕ್ಷ ಹನುಮಂತರೆಡ್ಡಿ ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ತೀರ್ಥಹಳ್ಳಿಯ ವಿದ್ಯಾರ್ಥಿನಿಗೆ ಹೃದಯಾಘಾತ, ಶೃಂಗೇರಿ ಕಾಲೇಜು ಹಾಸ್ಟೆಲ್‌ನಲ್ಲಿ ಕುಸಿದು ಬಿದ್ದು ಸಾವು
ಪಿಯುಸಿ ಸರ್ಟಿಫಿಕೇಟ್ ಇದ್ದರೆ ಮಾತ್ರ ವಾಹನಕ್ಕೆ ಪೆಟ್ರೋಲ್ -ಡೀಸೆಲ್, ಡಿ.18ರಿಂದ ಹೊಸ ನಿಯಮ