
ಬೆಗಳೂರು (ಡಿ.07): ಎಐಸಿಸಿ ಅಧ್ಯಕ್ಷರಾದ ಬಳಿಕ ರಾಹುಲ್ ಗಾಂಧಿ ಮೊದಲ ಬಾರಿಗೆ ರಾಜ್ಯಕ್ಕೆ ಭೆಟಿ ನೀಡಲಿದ್ದು ಅವರನ್ನು ಭರ್ಜರಿಯಾಗಿ ಸ್ವಾಗತಿಸಲು ಕೆಪಿಸಿಸಿ ನಿರ್ಧರಿಸಿದೆ.
ಹುಬ್ಬಳ್ಳಿ- ಧಾರವಾಡದಲ್ಲಿ ಅದ್ದೂರಿ ಸಮಾವೇಶ ನಡೆಸುವ ಬಗ್ಗೆ ಚಿಂತನೆ ನಡೆಸಲಾಗುತ್ತಿದ್ದು ರಾಜ್ಯದೆಲ್ಲೆಡೆಯಿಂದ 5 ಲಕ್ಷಕ್ಕೂ ಹೆಚ್ಚು ಜನರನ್ನ ಸೇರಿಸುವ ಬಗ್ಗೆ ತೀರ್ಮಾನಿಸಲಾಗಿದೆ. ಹುಬ್ಬಳ್ಳಿಯಲ್ಲಿ ವಿಮಾನ ನಿಲ್ದಾಣವಿದೆ, ಟ್ರಾಫಿಕ್ ಸಮಸ್ಯೆಯಿಲ್ಲ. ರಾಜ್ಯದ ಎಲ್ಲ ಭಾಗಗಳಿಂದಲೂ ಜನರು ಆಗಮಿಸಲು ಸುಲಭ ಎಂಬುದು ಕಾಂಗ್ರೆಸ್ ನಾಯಕರ ಲೆಕ್ಕಾಚಾರವಾಗಿದೆ.
ಹುಬ್ಬಳ್ಳಿಯಲ್ಲಿ ಸಾಧ್ಯವಾಗದಿದ್ದರೆ ಚಿಕ್ಕಮಗಳೂರಿನಲ್ಲಿ ಸಮಾರಂಭ ನಡೆಸಲು ಇನ್ನೊಂದು ಚಿಂತನೆ ನಡೆಸಲಾಗಿದೆ. ಡಿಸೆಂಬರ್ 23 ರಂದು ಚಿಕ್ಕಮಗಳೂರಿನಲ್ಲಿ ಇಂದಿರಾಗಾಂಧಿ ಜನ್ಮ ಶತಮಾನೋತ್ಸವ ಕಾರ್ಯಕ್ರಮಕ್ಕೆ ರಾಹುಲ್ ಗಾಂಧಿ ಆಗಮಿಸುವ ಸಾಧ್ಯತೆಯಿದ್ದು ಆ ಕಾರ್ಯಕ್ರಮವನ್ನೇ ಅದ್ದೂರಿಯಾಗಿ ಆಚರಿಸಲು ತೀರ್ಮಾನಿಸಲಾಗಿದೆ. ಇದು ಎಐಸಿಸಿ ಅಧ್ಯಕ್ಷರಾದ ಬಳಿಕ ರಾಹುಲ್ ಪಾಲ್ಗೊಳ್ಳುವ ಮೊದಲ ಸಮಾವೇಶವಾಗಿದ್ದು
ಎಲ್ಲಿ ಸಮಾವೇಶ ಎನ್ನುವ ಅಂತಿಮ ನಿರ್ಧಾರ ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್, ಸಿಎಂ ಸಿದ್ದರಾಮಯ್ಯ ವಿವೇಚನೆಗೆ ಬಿಟ್ಟಿದ್ದು ಎಂದು ಕಾಂಗ್ರೆಸ್ ಹೇಳಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.