23 ಕಾಂಗ್ರೆಸಿಗರು ವಜಾ : ಕೆಪಿಸಿಸಿ ಆದೇಶ

Published : Jul 31, 2019, 08:53 AM IST
23 ಕಾಂಗ್ರೆಸಿಗರು ವಜಾ : ಕೆಪಿಸಿಸಿ ಆದೇಶ

ಸಾರಾಂಶ

ರಾಜ್ಯದಲ್ಲಿ ಈಗಾಗಲೇ ಅತೃಪ್ತ ಕಾಂಗ್ರೆಸ್ ಮುಖಂಡರನ್ನು ಅನರ್ಹ ಮಾಡಲಾಗಿದ್ದು, ಅದರ ಬೆನ್ನಲ್ಲೇ 23 ಕಾಂಗ್ರೆಸಿಗರು ವಜಾಗೊಂಡಿದ್ದಾರೆ. 

ಬೆಂಗಳೂರು [ಜು.31]: ಮೈತ್ರಿ ಸರ್ಕಾರ ಪತನಕ್ಕೆ ಕಾರಣರಾಗಿ ಶಾಸಕ ಸ್ಥಾನದಿಂದ ಅನರ್ಹಗೊಂಡ ಕಾಂಗ್ರೆಸ್‌ನ ಹನ್ನೊಂದು ಅತೃಪ್ತ ಶಾಸಕರ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿನ 23 ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರುಗಳನ್ನು ಕೆಪಿಸಿಸಿ ಮಂಗಳವಾರ ವಜಾಗೊಳಿಸಿದೆ.

ಆಯಾ ಜಿಲ್ಲಾ ಕಾಂಗ್ರೆಸ್ ಸಮಿತಿಯೊಂದಿಗೆ ಪಕ್ಷ ಸಂಘಟನೆ ವಿಷಯದಲ್ಲಿ ಸಹಕರಿಸದ ಹಾಗೂ ಬ್ಲಾಕ್ ಕಾಂಗ್ರೆಸ್ ಮಟ್ಟದಲ್ಲಿ ಪಕ್ಷ ಬಲವರ್ಧನೆಯಲ್ಲಿ ಪಾಲ್ಗೊಳ್ಳದಿರುವ ಆರೋಪದ ಮೇಲೆ ಈ 23 ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರುಗಳನ್ನು ವಜಾಗೊಳಿ ಸಿದೆ. 

ಜತೆಗೆ ಆ ಎಲ್ಲಾ ಬ್ಲಾಕ್ ಕಾಂಗ್ರೆಸ್ ಸಮಿತಿಗಳ ಪದಾಧಿಕಾರಿಗಳು ಮತ್ತು ಕಾರ್ಯಕಾರಿ ಸಮಿತಿಯನ್ನು ಕೂಡ ವಿಸರ್ಜನೆಗೊಳಿಸಿ ಕೆಪಿಸಿಸಿ ಆದೇಶ ಹೊರಡಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಹೊಸದಾಗಿ 545 ಪಿಎಸ್‌ಐ ಶೀಘ್ರ ಸೇವೆಗೆ ನಿಯೋಜನೆ: ಗೃಹ ಸಚಿವ ಪರಮೇಶ್ವರ್‌
India Latest News Live: ಅಮೆರಿಕ ತೆರಿಗೆ ದಾಳಿಗೆ ಒಳಗಾದ ದೇಶಗಳಿಂದ ಮಾದರಿಯಾದ ಚೀನಾ; ಟ್ರಂಪ್‌ಗೆ ಶಾಕ್ ನೀಡಿ ದಾಖಲೆ ಬರೆದ ಡ್ರ್ಯಾಗನ್