
ಕಲಬುರಗಿ : ಕೆಪಿಎಸ್’ಸಿ ಪರೀಕ್ಷಾ ಅಕ್ರಮದ ಜಾಲವೊಂದು ಪತ್ತೆಯಾಗಿದೆ. ಈ ಸಂಬಂಧ ಚಂದ್ರಕಾಂತ್ ಎನ್ನುವವರು ಸೇರಿ ಹಲವರನ್ನು ಕಲಬುರಗಿಯ ಅಫ್ಜಲ್’ಪುರ ಪೊಲೀಸರು ಬಂಧಿಸಿದ್ದಾರೆ.
ಇನ್ನೋರ್ವ ಆರೋಪಿ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕನಾಗಿ ಕಾರ್ಯನಿರ್ವಹಿಸುತ್ತಿದ್ದ ಮೊಹಮದ್ ನದಾಫ್ ಎನ್ನುವಾತ ಪರಾರಿಯಾಗಿದ್ದಾನೆ. ಅಲ್ಲದೇ ಉಳಿದ ಆರೋಪಿಗಳಿಗಾಗಿ ಶೋಧ ನಡೆಸಲಾಗುತ್ತಿದೆ.
ಉದ್ಯೋಗಾಕಾಂಕ್ಷಿಗಳಿಂದ ಲಕ್ಷಾಂತರ ರು. ಹಣವನ್ನು ಪಡೆಯುತ್ತಿದ್ದ ಗ್ಯಾಂಗ್ ಸೂಕ್ಷ್ಮ ಇಯರ್ ಫೋನ್ ಮೂಲಕ ಪರೀಕ್ಷೆಯಲ್ಲಿ ಉತ್ತರಗಳನ್ನು ನೀಡುತ್ತಿದ್ದರು. ಪ್ರತೀ ಹುದ್ದೆಗೆ 10 ರಿಂದ 12 ಲಕ್ಷ ರು.ಗಳನ್ನು ಪಡೆಯುತ್ತಿದ್ದರು ಎನ್ನಲಾಗಿದೆ.
ಈ ಗ್ಯಾಂಗ್ ಇದುವರೆಗೆ 450ಕ್ಕೂ ಅಧಿಕ ಮಂದಿಗೆ ಉದ್ಯೋಗವನ್ನು ಕೊಡಿಸಿದೆ ಎನ್ನುವ ವಿಚಾರ ದೀಗ ಬೆಳಕಿಗೆ ಬಂದಿದೆ. ಕಳೆದ ತಿಂಗಳು ನಡೆದ ಫ್ಡಿಎ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎನ್ನುವ ರೋಪದ ಮೇರೆಗೆ ಪೊಲೀಸರು ವಿಚಾರಣೆಯನ್ನು ಆರಂಭಿಸಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.