
ನವದೆಹಲಿ : 2011 ರ ಕೆಪಿಎಸ್ಸಿಯ 363 ಅಭ್ಯರ್ಥಿಗಳ ಆಯ್ಕೆಯನ್ನು ರದ್ದುಗೊಳಿಸಿದ ಹೈಕೋರ್ಟ್ ತೀರ್ಮಾನವನ್ನು ಸುಪ್ರಿಂ ಕೋರ್ಟ್ ಬಹುತೇಕ ಎತ್ತಿ ಹಿಡಿದಿದ್ದು ಲಿಖಿತ ಪರೀಕ್ಷೆಯ ಬಗ್ಗೆಯೂ ಹೈ ಕೋರ್ಟ್ ವಿಚಾರಣೆ ನಡೆಸಲಿ ಎಂದು ಹೇಳಿದೆ.
ಸುಪ್ರೀಂ ಕೋರ್ಟ್'ನ ಗೊಯಲ್ ಮತ್ತು ರೊಹಿಂಗ್ಟನ್ ನೇತೃತ್ವದ ದ್ವಿಸದಸ್ಯ ಪೀಠ 2011 ಕೆಪಿಎಸ್ಸಿ ನೇಮಕಾತಿಯಲ್ಲಿ ಅವ್ಯವಹಾರ ನಡೆದ ಬಗ್ಗೆ ಅರ್ಜಿ ವಿಚಾರಣೆ ನಡೆಸಿ ಈ ತೀರ್ಪು ನೀಡಿದೆ. ಹೈಕೋರ್ಟ್ ಅಭ್ಯರ್ಥಿಗಳು ಮತ್ತು ಮೌಲ್ಯಮಾಪಕರ ನಡುವೆ ಸಂಬಂಧ ಇತ್ತೆ ಎಂಬುದರ ಬಗ್ಗೆ ವಿಚಾರಣೆ ನಡೆಸಿ ಮೂರು ತಿಂಗಳೊಳಗೆ ಈ ಬಗ್ಗೆ ತೀರ್ಮಾನ ಕೈಗೊಳ್ಳಲಿ ಎಂದು ತಿಳಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.