
ಅರಕಲಗೂಡು: ರಾಜ್ಯ ಸರ್ಕಾರ ದಲಿತರಿಗೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ ಬಿಡುಗಡೆ ಮಾಡಿರುವ ಹಣದ ಕುರಿತು ಶ್ವೇತಪತ್ರವನ್ನು ಹೊರಡಿಸಲಿ. ಹಿಂದೆ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರಕ್ಕಿಂತ ಹೆಚ್ಚು ಹಣವನ್ನು ಬಿಡುಗಡೆ ಮಾಡಿದ್ದು ಸಾಬೀತು ಪಡಿಸಿದರೆ ರಾಜಕೀಯ ನಿವೃತ್ತಿ ಹೊಂದುತ್ತೇನೆ ಎಂದು ವಿರೋಧ ಪಕ್ಷದ ನಾಯಕ ಕೆ.ಎಸ್. ಈಶ್ವರಪ್ಪ ಸವಾಲು ಹಾಕಿದರು.
ಹಾಸನ ಜಿಲ್ಲೆ ಅರಕಲಗೂಡಿನಲ್ಲಿ ನಡೆದ ಪರಿವರ್ತನಾ ಯಾತ್ರೆಯಲ್ಲಿ ಮಾತನಾಡಿದ ಅವರು, ದಲಿತರು ಮತ್ತು ಹಿಂದುಳಿದ ವರ್ಗಗಳು ಹಾಗೂ ರೈತರ ಜೀವನವನ್ನು ಮುಗಿಸಿದ ಹಾಗೂ ಜಾತಿ ವ್ಯಾಮೋಹದ ಲಾಭ ಪಡೆದ ಸಿಎಂ ಸಿದ್ದರಾಮಯ್ಯ ದಲಿತರ ಮತ್ತು ಹಿಂದುಳಿದ ವರ್ಗಗಳ ಮಠಗಳ ಮಠಾಧೀಶರಿಗೆ ಜಮೀನು ಮತ್ತು ಹಣವನ್ನು ನೀಡುವ ಆಮಿಷ ಒಡ್ಡುತ್ತಿದ್ದಾರೆ. ಅವರೊಬ್ಬ ಭಂಡ ಹಾಗೂ ಸುಳ್ಳು ಮುಖ್ಯಮಂತ್ರಿ. ಮುಸಲ್ಮಾನರ ಓಲೈಕೆಗೆ ಬಿದ್ದಿರುವ ಕಾಂಗ್ರೆಸ್ ದೇಶದ್ರೋಹಿ ಚಟುವಟಿಕೆಗಳಲ್ಲಿ ತೊಡಗಿಕೊಂಡಿರುವ ಗೂಂಡಾಗಳ ರಕ್ಷಣೆ ಮಾಡುತ್ತಿದೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.