12 ಬೆಳೆಗಳಿಗೆ ಬೆಂಬಲ ಬೆಲೆ : ಮೋದಿ ಸರ್ಕಾರದ ಹೆಗ್ಗಳಿಕೆ

By Web DeskFirst Published Aug 9, 2018, 12:29 PM IST
Highlights

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ವಿವಿಧ ಪಕ್ಷಗಳು ಸಾಕಷ್ಟು ಸಿದ್ಧತೆಯಲ್ಲಿ ತೊಡಗಿದ್ದು, ಈ ನಿಟ್ಟಿನಲ್ಲಿ ಬಿಜೆಪಿ ಮುಖಂಡರು ಕೂಡ ಗುರುವಾರದಿಂದ ರಾಜ್ಯ ಪ್ರವಾಸ ಕೈಗೊಂಡಿದ್ದಾರೆ. ಈ ಪ್ರವಾಸದ ವೇಳೆ ಮೋದಿ ಸರ್ಕಾರದ ಸಾಧನೆಗಳ ಬಗ್ಗೆ ಜನರಿಗೆ ತಿಳಿಸಲಿದ್ದಾರೆ. 

ಮೈಸೂರು :  ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ವಿವಿಧ ಪಕ್ಷಗಳು ಸಾಕಷ್ಟು ಸಿದ್ಧತೆಯಲ್ಲಿ ತೊಡಗಿದ್ದು, ಈ ನಿಟ್ಟಿನಲ್ಲಿ ಬಿಜೆಪಿ ಮುಖಂಡರು ಕೂಡ ಗುರುವಾರದಿಂದ ರಾಜ್ಯ ಪ್ರವಾಸ ಕೈಗೊಂಡಿದ್ದಾರೆ. ಈ ಬಗ್ಗೆ ಮಾತನಾಡಿದ ಬಿಜೆಪಿ ಮುಖಂಡ ಈಶ್ವರಪ್ಪ ಅವರು ಕೇಂದ್ರ ಸರ್ಕಾರ್ ಸಾಧನೆ ಬಗ್ಗೆ ಜನರಿಗೆ ಮಾಹಿತಿ ನೀಡಲಾಗುತ್ತದೆ ಎಂದು ಹೇಳಿದ್ದಾರೆ. 

ಮೈಸೂರಿನಲ್ಲಿ ಮಾತನಾಡಿದ ಅವರು ಪ್ರಧಾನಿ ನರೇಂದ್ರ ಮೋದಿ ರೈತರಿಗೆ ಮತ್ತು ಹಿಂದುಳಿದ ವರ್ಗದ ಜನರಿಗೆ ಸಾಕಷ್ಟು ಕೆಲಸ ಮಾಡಿದ್ದಾರೆ. 12 ಬೆಳೆಗಳಿಗೆ ಮೊದಲ ಬಾರಿಗೆ ಬೆಂಬಲ ಬೆಲೆಯನ್ನ  ಘೋಷಣೆ ಮಾಡಿದ ದೇಶದ ಮೊದಲ‌ ಪ್ರಧಾನಿ  ಎಂಬ ಹೆಗ್ಗಳಿಕೆ ನರೇಂದ್ರ ಮೋದಿ ಅವರದ್ದಾಗಿದೆ ಎಂದು ಮೈಸೂರಿನಲ್ಲಿ ತಿಳಿಸಿದರು. 

ರಾಜ್ಯದಲ್ಲಿ ಸರ್ಕಾರವೇ ಇಲ್ಲ, ಯಾವುದೇ ಸರ್ಕಾರಿ ಅಧಿಕಾರಿಗಳನ್ನ ಕೇಳಿದರೆ ಸರ್ ಯಾವತ್ತು ಈ ಸರ್ಕಾರ ಹೋಗುತ್ತೊ‌ ಗೊತ್ತಿಲ್ಲ ಎಂದು ಹೇಳುತ್ತಾರೆ. ಯಾವತ್ತು ನನ್ನ ವರ್ಗಾವಣೆ ಮಾಡುತ್ತಾರೋ ಗೊತ್ತಿಲ್ಲ ಎಂದು ಆತಂಕ ವ್ಯಕ್ತ ಪಡಿಸುತ್ತಾರೆ. ಕರ್ನಾಟಕ‌ ರಾಜ್ಯದಲ್ಲಿ ವರ್ಗಾವಣೆಯಲ್ಲಿ ಇಷ್ಟೊಂದು ಭ್ರಷ್ಟಾಚಾರ ಈ ಹಿಂದೆ ಎಂದೂ ಕೂಡ ನಡೆದಿಲ್ಲ ಎಂದು ಸರ್ಕಾರದ ವಿರುದ್ಧವೂ ಕೂಡ ಈಶ್ವರಪ್ಪ ವಾಗ್ದಾಳಿ.

ಸಾರ್ವಜನಿಕರೂ ರಾಜ್ಯದಲ್ಲಿ ಸರ್ಕಾರ ಇದೆಯಾ ಎಂಬ ಬಗ್ಗೆ ಪ್ರಶ್ನೆ ಕೇಳುತ್ತಿದ್ದಾರೆ. ಐಎಎಸ್ ಅಧಿಕಾರಿಗಳ‌ ವರ್ಗಾವಣೆಯಲ್ಲಿ ಭಾರಿ ಅವ್ಯವಹಾರ ನಡೆಯುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

click me!