ಬ್ರಿಗೇಡ್ ಪ್ರಶ್ನಿಸಲು ಶೋಭಾ ಯಾರು? ನಾನು, ಯಡಿಯೂರಪ್ಪ ಭಾರತ-ಪಾಕಿಸ್ತಾನದಂತೆ ಅಲ್ಲ

Published : May 09, 2017, 02:51 AM ISTUpdated : Apr 11, 2018, 12:41 PM IST
ಬ್ರಿಗೇಡ್ ಪ್ರಶ್ನಿಸಲು ಶೋಭಾ ಯಾರು? ನಾನು, ಯಡಿಯೂರಪ್ಪ ಭಾರತ-ಪಾಕಿಸ್ತಾನದಂತೆ ಅಲ್ಲ

ಸಾರಾಂಶ

ಹಾಗಿದ್ದ ಮೇಲೆ ಬ್ರಿಗೇಡ್‌ ಬಗ್ಗೆ ಮಾತನಾಡುವುದಕ್ಕೆ ಅವರಿಗೆ ಅಧಿಕಾರ ಕೊಟ್ಟವರು ಯಾರು? ಜೆಡಿಎಸ್‌ ರಾಜ್ಯಾ ಧ್ಯಕ್ಷ ಎಚ್‌.ಡಿ.ಕುಮಾರ ಸ್ವಾಮಿ ಅವರೂ ಬ್ರಿಗೇಡ್‌ಗೆ ಬಿಜೆಪಿ ಹೈಕಮಾಂಡ್‌ನ ಬೆಂಬಲವಿದೆ ಎಂಬ ಹೇಳಿಕೆ ನೀಡಿದ್ದಾರೆ. ಅವರಿಗೂ ಬ್ರಿಗೇಡ್‌ ಬಗ್ಗೆ ಮಾತನಾಡುವ ಅಧಿಕಾರವಿಲ್ಲ.

ಬೆಂಗಳೂರು/ಬಳ್ಳಾರಿ(ಮೇ.09): ಎಚ್‌ಡಿಕೆಗೂ ಟಾಂಗ್‌ ಸಂಗೊಳ್ಳಿ ರಾಯಣ್ಣ ಬ್ರಿಗೇಡ್‌ಗೂ ಶೋಭಾ ಕರಂದ್ಲಾಜೆ ಅವರಿಗೂ ಯಾವುದೇ ಸಂಬಂಧವಿಲ್ಲ. ಹಾಗಿದ್ದ ಮೇಲೆ ಬ್ರಿಗೇಡ್‌ ಬಗ್ಗೆ ಮಾತನಾಡುವುದಕ್ಕೆ ಅವರಿಗೆ ಅಧಿಕಾರ ಕೊಟ್ಟವರು ಯಾರು? ಜೆಡಿಎಸ್‌ ರಾಜ್ಯಾ ಧ್ಯಕ್ಷ ಎಚ್‌.ಡಿ.ಕುಮಾರ ಸ್ವಾಮಿ ಅವರೂ ಬ್ರಿಗೇಡ್‌ಗೆ ಬಿಜೆಪಿ ಹೈಕಮಾಂಡ್‌ನ ಬೆಂಬಲವಿದೆ ಎಂಬ ಹೇಳಿಕೆ ನೀಡಿದ್ದಾರೆ. ಅವರಿಗೂ ಬ್ರಿಗೇಡ್‌ ಬಗ್ಗೆ ಮಾತನಾಡುವ ಅಧಿಕಾರವಿಲ್ಲ. ಕೆ.ಎಸ್‌.ಈಶ್ವರಪ್ಪ ಮೇಲ್ಮನೆ ವಿಪಕ್ಷ ನಾಯಕ ‘ರಾಯಣ್ಣ ಬ್ರಿಗೇಡ್‌ ಬಗ್ಗೆ ಮಾತಾಡಲು ಶೋಭಾ ಕರಂದ್ಲಾಜೆ ಅವರಿಗೆ ಅಧಿಕಾರ ಕೊಟ್ಟವರು ಯಾರು' ಎಂದು ಬ್ರಿಗೇಡ್‌ ಸಂಸ್ಥಾಪಕರೂ ಆಗಿ ರುವ ಬಿಜೆಪಿ ನಾಯಕ ಕೆ.ಎಸ್‌.ಈಶ್ವರಪ್ಪ ಖಾರ ವಾಗಿ ಪ್ರಶ್ನಿಸಿದ್ದಾರೆ. ರಾಯಣ್ಣ ಬ್ರಿಗೇಡ್‌ ಎಂದಿ ನಂತೆ ಮುಂದುವರೆಯಲಿದೆ. ಅದನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ ಎಂದೂ ಸ್ಪಷ್ಟಪಡಿಸಿದ್ದಾರೆ. ಆದರೆ, ತಾವು ಮತ್ತು ಯಡಿಯೂರಪ್ಪ ನಡುವಣ ಬಾಂಧವ್ಯ ಭಾರತ -ಪಾಕಿಸ್ತಾನದಂತಲ್ಲ, ಇಬ್ಬರೂ ಜತೆಯಾಗಿರುವುದಾಗಿ ಹೇಳಿದ್ದಾರೆ. ಸೋಮವಾರ ಅವರು ಆಂಧ್ರಕ್ಕೆ ಹೊರಡುವ ಮುನ್ನ ಸುದ್ದಿಗಾರರ ಜತೆ ಮಾತನಾಡುತ್ತಿದ್ದರು.

ಭಾನುವಾರವಷ್ಟೇ ಮೈಸೂರಿನಲ್ಲಿ ನಡೆದ ಕಾರ್ಯಕಾರಿಣಿ ಸಮಾರೋಪ ಸಮಾರಂಭದ ನಂತರ ಸಂಸದೆ ಶೋಭಾ ಕರಂದ್ಲಾಜೆ ಅವರು ನಡೆಸಿದ ಪತ್ರಿಕಾಗೋಷ್ಠಿ ವೇಳೆ ಪ್ರಧಾನಿ ಮೋದಿ ಅವರು ತಮ್ಮ ಹೆಸರಿನ ಎಲ್ಲ ಸಂಘಟನೆಗಳನ್ನೂ ವಿಸರ್ಜಿಸುವಂತೆ ಸೂಚಿಸಿದ್ದಾರೆ. ಇದು ರಾಜ್ಯದ ರಾಯಣ್ಣ ಬ್ರಿಗೇಡ್‌ಗೂ ಅನ್ವಯವಾಗಲಿದೆ ಎಂಬ ಮಾತನ್ನು ಹೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಈಶ್ವರಪ್ಪ, ಸಂಗೊಳ್ಳಿ ರಾಯಣ್ಣ ಬ್ರಿಗೇಡ್‌ಗೂ ಶೋಭಾ ಕರಂದ್ಲಾಜೆ ಅವರಿಗೂ ಯಾವುದೇ ಸಂಬಂಧವಿಲ್ಲ. ಹಾಗಿದ್ದ ಮೇಲೆ ಬ್ರಿಗೇಡ್‌ ಬಗ್ಗೆ ಮಾತನಾಡುವುದಕ್ಕೆ ಅವರಿಗೆ ಅಧಿಕಾರ ಕೊಟ್ಟವರು ಯಾರು? ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಅವರೂ ಬ್ರಿಗೇಡ್‌ಗೆ ಬಿಜೆಪಿ ಹೈಕಮಾಂಡ್‌ನ ಬೆಂಬಲವಿದೆ ಎಂಬ ಹೇಳಿಕೆ ನೀಡಿದ್ದಾರೆ. ಅವರಿಗೂ ಬ್ರಿಗೇಡ್‌ ಬಗ್ಗೆ ಮಾತನಾಡುವ ಅಧಿಕಾರವಿಲ್ಲ ಎಂದು ಖಡಕ್ಕಾಗಿ ಹೇಳಿದರು. ಪಕ್ಷದ ರಾಜ್ಯಾಧ್ಯಕ್ಷ ಯಡಿಯೂರಪ್ಪ ಹಾಗೂ ನಾನು ಹಿಂದುಸ್ತಾನ-ಪಾಕಿಸ್ತಾನ ಅಲ್ಲ. ಯಡಿಯೂರಪ್ಪ ಹಾಗೂ ನನ್ನ ನಡುವಿನ ವಿವಾದದ ಬಗ್ಗೆ ಯಾವುದೇ ಗೊಂದಲ ಬೇಡ. ನಾವು ಜತೆಯಾಗಿದ್ದೇವೆ. ಜತೆಯಾಗಿಯೇ ಇರುತ್ತೇವೆ. ಮೈಸೂರಿನಲ್ಲಿ ನಡೆದ ಕಾರ್ಯಕಾರಿಣಿಯಲ್ಲೂ ನಾವು ಜತೆ ಜತೆಯಾಗಿಯೇ ಇದ್ದೆವು ಎಂದರು. ಹಿಂದುಳಿದ ಮತ್ತು ದಲಿತ ವರ್ಗಗಳ ಕಲ್ಯಾಣಕ್ಕಾಗಿ ಸ್ಥಾಪಿಸಿದ ಸಂಗೊಳ್ಳಿ ರಾಯಣ್ಣ ಬ್ರಿಗೇಡ್‌ ಚಟುವಟಿಕೆ ಅದರ ಪಾಡಿಗೆ ಮುಂದುವರಿಯುತ್ತದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರ ಸೂಚನೆ ಮೇರೆಗೆ ಬ್ರಿಗೇಡ್‌ನ ರಾಜಕೀಯ ಚಟುವಟಿಕೆಗಳನ್ನು ಕೈಬಿಟ್ಟು, ಇತರ ಸಾಮಾಜಿಕ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗುತ್ತದೆ. ಆ ದಿಕ್ಕಿನಲ್ಲಿ ಸಂಘಟನೆ ಮುಂದಡಿ ಇಟ್ಟಿದೆ. ಪಕ್ಷದ ರಾಜ್ಯ ಕಾರ್ಯ ಕಾರಿಣಿ ವೇಳೆ ಬ್ರಿಗೇಡ್‌ ನಿಲ್ಲಿಸುವಂತೆ ಯಾರೊಬ್ಬರೂ ಸೂಚನೆ ಕೊಟ್ಟಿಲ್ಲ. ನಿರ್ಣಯವನ್ನೂ ಕೈಗೊಂಡಿಲ್ಲ. ಆ ಬಗ್ಗೆ ಪ್ರಸ್ತಾಪವೇ ಆಗಿಲ್ಲ ಎಂದು ತಿಳಿಸಿದರು.

(ಕನ್ನಡಪ್ರಭ ವಾರ್ತೆ)

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬಿಟೆಕ್ ಪದವಿಯನ್ನು ಪೂರ್ಣಗೊಳಿಸಲು ಅಸಮರ್ಥರಾಗಿರುವ ವಿದ್ಯಾರ್ಥಿಗಳಿಗೆ ಹೊಸ ಯೋಜನೆ ಘೋಷಿಸಿದ ಐಐಟಿ ಮದ್ರಾಸ್‌
ದುಬೈನಲ್ಲಿ ಕುಳಿತು ಕರಾವಳಿಯಲ್ಲಿ ಕೋಮು ಭಾವನೆ ಕೆರಳಿಸುವ ಪೋಸ್ಟ್ ಹಾಕುತ್ತಿದ್ದವನ ಬಂಧಿಸಿದ ಮಂಗಳೂರು ಪೊಲೀಸರು