
ಬೆಂಗಳೂರು: ಈಗಾಗಲೇ ರಾಜ್ಯದಲ್ಲಿ ಮುಂಗಾರು ಪ್ರವೇಶವಾಗಿದ್ದು ಹಲವೆಡೆ ಭಾರಿ ಪ್ರಮಾಣದಲ್ಲಿ ವರುಣನ ಆರ್ಭಟವಿದೆ. ಇದೀಗ ಬೆಂಗಳೂರಿನಲ್ಲಿಯೂ ಹೆಚ್ಚಿನ ಪ್ರಮಾಣದಲ್ಲಿ ಮಳೆ ಸುರಿಯುವ ಬಗ್ಗೆ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪಗಳ ನಿರ್ವಹಣಾ ಕೇಂದ್ರವು ಮುನ್ನೆಚ್ಚರಿಕೆ ನೀಡಿದೆ. ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆಯಾಗಲಿದ್ದು ಪ್ರವಾಹ ಪರಿಸ್ಥಿತಿ ಎದುರಾಗುವ ಸಾಧ್ಯತೆ ಇದೆ ಎಂದು ಎಚ್ಚರಿಸಿದೆ.
ನಗರದ ತಗ್ಗು ಪ್ರದೇಶಗಳು ಹಾಗೂ ಕೆಲವು ಆಯ್ದ ಪ್ರದೇಶಗಳು ಅತ್ಯಧಿಕ ಪ್ರಮಾಣದಲ್ಲಿ ನೀರಿನಿಂದಾವೃತವಾಗುವ ಸಾಧ್ಯತೆ ಇದ್ದು, ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ.
ನಗರದ ಪ್ರಮುಖ ಪ್ರದೇಶಗಳಾದ ರಾಜರಾಜೇಶ್ವರಿ ನಗರ, ಪೂರ್ವ ವಲಯ, ದಕ್ಷಿಣ ವಲಯ, ಮಹಾದೇವಪುರ, ಬೊಮ್ಮನಹಳ್ಳಿ ಪ್ರದೇಶಗಳಲ್ಲಿನ ಜನರು ಹೆಚ್ಚಿನ ಎಚ್ಚರಿಕೆಯಿಂದ ಇರಲು ವಿಪತ್ತು ನಿರ್ವಹಣಾ ಕೇಂದ್ರವು ತಿಳಿಸಿದೆ. ಪಶ್ಚಿಮ ವಲಯದ ಪ್ರದೇಶಗಳಾದ ದಾಸನಪುರ ಸೇರಿದಂತೆ ಕೆಲ ಪ್ರದೇಶಗಳಲ್ಲಿಯೂ ಹೆಚ್ಚಿನ ಪ್ರಮಾಣದಲ್ಲಿ ಮಳೆ ಸುರಿಯಲಿದೆ.
ನಗರದಲ್ಲಿ ದಟ್ಟವಾದ ಮೊಡ ಆವರಿಸಿದ್ದು, ಈ ನಿಟ್ಟಿನಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.