ರಜಾ ದಿನಗಳಂದೂ ಮುಕ್ತ ವಿವಿ ಪ್ರವೇಶಾತಿ ಸೌಲಭ್ಯ

Published : Oct 14, 2018, 11:00 AM IST
ರಜಾ ದಿನಗಳಂದೂ ಮುಕ್ತ  ವಿವಿ ಪ್ರವೇಶಾತಿ ಸೌಲಭ್ಯ

ಸಾರಾಂಶ

ರಜಾ ದಿನಗಳಂದೂ ಮುಕ್ತ ವಿವಿ ಪ್ರವೇಶಾತಿ ಸೌಲಭ್ಯ | 2018-19ನೇ ಸಾಲಿಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ (ಕೆಎಸ್‌ಒಯು) ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸ್‌ಗಳಿಗೆ ಪ್ರವೇಶಾತಿ ಬಯಸುವವರು ಅ.20ರವರೆಗೆ ರಜೆ ದಿನಗಳಲ್ಲಿಯೂ ಪ್ರವೇಶ ಪಡೆಯಲು ಅವಕಾಶ | 

ಬೆಂಗಳೂರು (ಅ. 14):  2018-19ನೇ ಸಾಲಿಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ (ಕೆಎಸ್‌ಒಯು) ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸ್‌ಗಳಿಗೆ ಪ್ರವೇಶಾತಿ ಬಯಸುವವರು ಅ.20ರವರೆಗೆ ರಜೆ ದಿನಗಳಲ್ಲಿಯೂ ಪ್ರವೇಶ ಪಡೆಯಲು ಅವಕಾಶ ಕಲ್ಪಿಸಲಾಗಿದೆ.

ವಿದ್ಯಾರ್ಥಿಗಳು ಸರ್ಕಾರಿ ರಜೆಗಳು ಮತ್ತು ಭಾನುವಾರ ಕೂಡ ಪ್ರಾದೇಶಿಕ ಕೇಂದ್ರಗಳಲ್ಲಿ ಶುಲ್ಕ ಪಾವತಿಸಬಹುದು. ಎಂ.ಎಸ್ಸಿ ಕೋರ್ಸ್‌ಗಳಿಗೆ ದಂಡ ಶುಲ್ಕವಿಲ್ಲದೆ ಪ್ರವೇಶ ಪಡೆಯಬಹುದು. 200 ರು. ದಂಡ ಶುಲ್ಕದೊಂದಿಗೆ ಬಿಎ, ಬಿ.ಕಾಂ., ಎಂ.ಎ, ಎಂ.ಕಾಂ., ಎಂ.ಸಿಜಿ, ಎಂಎಲ್‌ಐಎಸ್ಸಿ ಪ್ರವೇಶಾತಿಗೆ ಪ್ರವೇಶ ಪಡೆಯುವ ಸೌಲಭ್ಯ ಕಲ್ಪಿಸಿದೆ.

ಬಿಪಿಎಲ್‌ ಪಡಿತರ ಚೀಟಿ ಹೊಂದಿರುವ ವಿದ್ಯಾರ್ಥಿನಿಯರಿಗೆ ಬೋಧನಾ ಶುಲ್ಕದಲ್ಲಿ ಶೇ.25ರ ವರೆಗೆ ವಿನಾಯಿತಿ ನೀಡಲಾಗುತ್ತದೆ. ಪರಿಶಿಷ್ಟಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳಿಗೂ ಶುಲ್ಕ ವಿನಾಯಿತಿ ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಬೆಂಗಳೂರಿನ ಮಲ್ಲೇಶ್ವರ ಪ್ರಾದೇಶಿಕ ಕೇಂದ್ರ- 98445 06629 ಅಥವಾ ಚಾಮರಾಜಪೇಟೆ- 94486 68880 ಸಂಪರ್ಕಿಸಬಹುದು ಎಂದು ಕೆಎಸ್‌ಒಯು ಪ್ರಕಟಣೆಯಲ್ಲಿ ತಿಳಿಸಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಇದೇ ಮೊದಲ ಬಾರಿಗೆ ಅತೀ ದುಬಾರಿಯಾದ ಬೆಳ್ಳಿ, ಚಿನ್ನಕ್ಕಿಂತ ವೇಗದಲ್ಲಿ ಸಾಗುತ್ತಿದೆ ಸಿಲ್ವರ್
ರಾಜ್ಯದ ತಾಪಮಾನ 12°Cಗೆ ಕುಸಿತ-ಕರುನಾಡಿಗೆ ಶೀತ ಕಂಟಕ ಖಚಿತ-ಬೆಂಗಳೂರು ಜನತೆಗೆ ಮೈನಡುಕ ಉಚಿತ!