ಕ್ರಿಸ್ ಮಸ್: KSRTCಯಿಂದ ವಿಶೇಷ ಬಸ್, ವಿಶೇಷ ದರ..!

By Web DeskFirst Published Dec 19, 2018, 6:48 PM IST
Highlights

ಕ್ರಿಸ್‌ಮಸ್ ಹಬ್ಬಕ್ಕೆ ಊರಿಗೆ ಹೋಗುವ ಪ್ರಯಾಣಿಕರಿಗಾಗಿ ಕರ್ನಾಟಕ ರಾಜ್ಯ ಸಾರಿಗೆ ನಿಗಮ [KSRTC) ವಿಶೇಷ ದರದಲ್ಲಿ ವಿಶೇಷ ಬಸ್ ವ್ಯವಸ್ಥೆ ಕಲ್ಪಿಸಿದೆ. ಹಾಗಾದ್ರೆ ವಿಶೇಷ ಬಸ್ ಗಳು ಎಲ್ಲಿಂದ ಹೊರಡಲಿವೆ? ಬಸ್ ದರದಲ್ಲಿ ಎಷ್ಟು ರಿಯಾಯಿತಿ? ಇಲ್ಲಿದೆ ಸಂಪೂರ್ಣ ಮಾಹಿತಿ.

ಬೆಂಗಳೂರು, [ಡಿ.19]: ಕ್ರಿಸ್‌ಮಸ್ ಹಬ್ಬದ ಪ್ರಯುಕ್ತ  ಪ್ರಯಾಣಿಕರ ಅನುಕೂಲಕ್ಕಾಗಿ ಕೆಎಸ್ಆರ್‌ಟಿಸಿ 550 ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಮಾಡಿದೆ. 

21.12.2016 ಹಾಗೂ 22.12.2018 ರಂದು ಬೆಂಗಳೂರಿನಿಂದ ವಿವಿಧ ಜಿಲ್ಲೆಗಳು ಮತ್ತು ಅಕ್ಕ-ಪಕ್ಕದ ರಾಜ್ಯಗಳಿಗೆ ಈ ಬಸ್‌ಗಳು ಸಂಚಾರ ನಡೆಸಲಿವೆ.

 ಜೊತೆಗೆ ರಾಜ್ಯದ ಮತ್ತು ಅಂತರರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ದಿನಾಂಕ 25.12.2016 ರಂದು ವಿಶೇಷ ವಾಹನಗಳು ಸಂಚರಿಸಲಿವೆ ಎಂದು ಸಂಸ್ಥೆ ತಿಳಿಸಿದೆ.

ವಿಶೇಷ ಬಸ್​ ಗಳು ಎಲ್ಲೆಲ್ಲಿಂದ ಸಂಚಾರ?

ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ,ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ತಿರುಪತಿ ಮುಂತಾದ ಸ್ಥಳಗಳಿಗೆ ವಿಶೇಷ ಕಾರ್ಯಾಚರಣೆ.

ಮೈಸೂರು ರಸ್ತೆ ಬಸ್ ನಿಲ್ದಾಣದಿಂದ
ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಕಡೆಗೆ ಸಂಚಾರ ಮಾಡಲಿವೆ. 

Operation of 550 additional buses by KSRTC during Christmas Festival. pic.twitter.com/uOWHqSIgju

— KSRTC (@KSRTC_Journeys)

ಶಾಂತಿನಗರ ನಿಲ್ದಾಣದಿಂದ ಹೊರಡುವ ಬಸ್

ತಮಿಳುನಾಡು ಮತ್ತು ಆಂಧ್ರಪ್ರದೇಶ/ತೆಲಂಗಾಣ ಕಡೆಗೆ ಅಂದರೆ ಮಧುರೈ, ಕುಂಭಕೋಣಂ, ತಿರುಚಿ, ಚಿನ್ನೈ, ಕೊಯಮತ್ತೂರ್ ತಿರುಪತಿ, ವಿಜಯವಾಡ, ಹೈದರಾಬಾದ್ ಮುಂತಾದ ಸ್ಥಳಗಳಿಗೆ ಹೋಗುವ ಪ್ರತಿಷ್ಠಿತ ಸಾರಿಗೆಗಳನ್ನು ಶಾಂತಿನಗರದಲ್ಲಿನ ಬೆಂಗಳೂರು ಕೇಂದ್ರ ಘಟಕ-4 ಮತ್ತು ಘಟಕ-2 ರ ಮುಂಭಾಗದಿಂದ ವಿಶೇಷ ಕಾರ್ಯಾಚರಣೆ ಮಾಡಲಾಗುವುದು,

ಬೆಂಗಳೂರು ನಗರದ ಶ್ರೀ ಬಸವೇಶ್ವರ ಬಸ್ ನಿಲ್ದಾಣ, ವಿಜಯನಗರ, ಜಯನಗರ 4ನೇ ಬ್ಲಾಕ್, ಜಾಲಹಳ್ಳಿ ಕ್ರಾಸ್, ನವರಂಗ್(ರಾಜಾಜಿನಗರ), ಮಲ್ಲೇಶ್ವರಂ 8ನೇ ಅಡ್ಡ ರಸ್ತೆ, ಬನಶಂಕರಿ, ಜೀವನ್ ಭೀಮಾನಗರ, ಐಟಿಐ ಗೇಟ್, ಗಂಗಾನಗರ, ಕೆಂಗೇರಿ ಉಪನಗರ, ಮುಂತಾದ ಸ್ಥಳಗಳಿಂದ ಪ್ರಯಾಣಿಕರ ಒತ್ತಡಕ್ಕನುಗುಣವಾಗಿ ಶಿವಮೊಗ್ಗ, ದಾವಣಗೆರೆ, ತಿರುಪತಿ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ಕುಕ್ಕೆಸುಬ್ರಮಣ್ಯ, ಧರ್ಮಸ್ಥಳ ಮುಂತಾದ ಮಾರ್ಗಗಳಿಗೆ ಹೆಚ್ಚುವರಿ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ.

ಇನ್ನೂ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಸಾರಿಗೆಗಳಿಗೆ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯಗಳನ್ನು ಕಲ್ಪಿಸಲಾಗಿದ್ದು, Www.ksrtc.in ವೆಬ್ ಸೈಟ್ ಮುಖಾಂತರ ಟಿಕೆಟ್​ ಬುಕ್​ ಮಾಡಬಹುದಾಗಿದೆ. 

ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೆಟ್​ ಕಾಯ್ದಿರಿಸಿದಲ್ಲಿ ಶೇಕಡ 5 ರಷ್ಟು ರಿಯಾಯಿತಿ ಹಾಗೂ ಹೋಗುವ ಮತ್ತು ಬರುವ ಟಿಕೆಟ್​ ಅನ್ನು ಒಟ್ಟಿಗೆ ಬುಕ್​ ಮಾಡಿದರೆ, ‘ಪ್ರಯಾಣ ದರದಲ್ಲಿ ಶೇಕಡ 10 ರಷ್ಟು ರಿಯಾಯಿತಿ ನೀಡಲಾಗುವುದು ಎಂದು ರಾಜ್ಯ ರಸ್ತೆ ಸಾರಿಗೆ ನಿಗಮದ ಎಂಡಿ ಶಿವಯೋಗಿ ಸಿ. ಕಳಸದ್ ತಿಳಿಸಿದ್ದಾರೆ. 

ಇದೇ ಸುದ್ದಿಯನ್ನು ಇಂಗ್ಲೀಷ್ ನಲ್ಲಿ ಓದಲು ಇಲ್ಲಿ ಕ್ಲಿಕ್ಕಿಸಿ

click me!