
ಬೆಂಗಳೂರು(ನ.20): ನಗರದಲ್ಲಿ ಇಂದು ವಿವಿಧ ಶೇಣಿಗಳಿಗೆ ನಡೆಯಬೇಕಿದ್ದ ಕೆಎಸ್'ಆರ್ಟಿಸಿ ಆನ್'ಲೈನ್ ಪರೀಕ್ಷೆ ತಾಂತ್ರಿಕ ತೊಂದರೆಗಳಿಂದಾಗಿ ರದ್ದಾಗಿದೆ. ಪರೀಕ್ಷೆ ರದ್ದಾಗಿರುವ ಬಗ್ಗೆ ಅಧಿಕೃತ ಮಾಹಿತಿ ನೀಡಿರುವ ಕೆ ಎಸ್ ಆರ್ ಟಿ ಸಿ ವ್ಯವಸ್ಥಾಪಕ ನಿರ್ದೇಶಕ ರಾಜೇಂದ್ರ ಕಟಾರೀಯ,ಪರೀಕ್ಷೆಗೆ ಹಾಜರಾಗಿ ತೊಂದರೆಯಾಗಿರುವುದರಿಂದ ಅಭ್ಯರ್ಥಿಗಳಗೆ ತಮ್ಮ ಊರುಗಳಿಗೆ ತೆರಳಲು ಉಚಿತವಾಗಿ ಬಸ್ಸ್ ಗಳ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಇಂಡಿಯನ್ ಇನ್ಸ್ಸ್ಟಿಟ್ಯೂಟ್ ಆಫ್ ಸೈನ್ಸ್ ಸಹಯೋಗದೊಂದಿಗೆ ಇದೇ ಮೊದಲ ಬಾರಿಗೆ ಆನ್ಲೈನ್ ಪರೀಕ್ಷೆ ಆಯೋಜಿಸಿದ್ದ KSRTC ಸಂಸ್ಥೆ , ಪರೀಕ್ಷೆ ರದ್ದಾಗಿರುವುದರಿಂದ ಲೋಪಗಳನ್ನು ಸರಿಪಡಿಸಿ ಪರೀಕ್ಷೆಯ ಹೋಸ ದಿನಾಂಕವನ್ನು ಸದ್ಯದಲ್ಲಿಯೇ ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ. ಅಂದು ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ಉಚಿತವಾಗಿಯೆ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗುವುದು ಎಂದು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.