
ಬೆಂಗಳೂರು(ಅ.18): ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರು ವೇತನ ಹೆಚ್ಚಳ ಸೇರಿದಂತೆ ವಿವಿ‘ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರ ಕೈಗೊಂಡಿರುವ ಬೆನ್ನಲ್ಲೇ ಸಿಐಟಿಯು ಸಂಯೋಜಿತ ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆಗಳ ನೌಕರರ ಫೆಡರೇಶನ್ ನ.2ರಿಂದ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹಕ್ಕೆ ಕರೆ ನೀಡಿದೆ.
ಕಳೆದ ವರ್ಷ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಜುಲೈ 25 ರಿಂದ ಮೂರು ದಿನಗಳ ಕಾಲ ನೌಕರರು ಮುಷ್ಕರ ನಡೆಸಿದ್ದರು. ಈ ವೇಳೆ ಮಾತುಕತೆಗೆ ಮುಂದಾದ ಸರ್ಕಾರ, ಹಲವು ಸುತ್ತುಗಳ ಸಭೆ ಬಳಿಕ ಬೇಡಿಕೆ ಈಡೇರಿಸುವ ಭರವಸೆ ನೀಡಿತ್ತು. ಅದರಂತೆ ನೌಕರರ ವೇತನ ಶೇ.12.5ರಷ್ಟು ಏರಿಸಿ, ಒಂದು ತಿಂಗಳೊಳಗೆ ಉಳಿದ ಬೇಡಿಕೆ ಈಡೇ ರಿಸುವುದಾಗಿ ಆಶ್ವಾಸನೆ ನೀಡಲಾಗಿತ್ತು. ಒಂದೂವರೆ ವರ್ಷವಾದರೂ ಬೇಡಿಕೆಗಳು ಈಡೇರಿಲ್ಲ. ಹಲವು ಬಾರಿ ಆಡಳಿತ ಮಂಡಳಿ ಹಾಗೂ ಸರ್ಕಾರಕ್ಕೆ ಮನವಿ ನೀಡಿದರೂ ನಿರ್ಲಕ್ಷಿಸಲಾಗಿದೆ. ಈ ಹಿನ್ನೆಲೆಯಲ್ಲಿ ನ.2ರಂದು ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಸೇರಿದಂತೆ ನಾಲ್ಕು ನಿಗಮಗಳ ನೌಕರರು ನ.2ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ತೀರ್ಮಾ ನಿಸಲಾಗಿದೆ ಎಂದು ಸಿಐಟಿಯು ಸಂಯೋಜಿತ ಸಾರಿಗೆ ಸಂಸ್ಥೆಗಳ ನೌಕರರ ಫೆಡರೇಶನ್ ರಾಜ್ಯಾ‘ಧ್ಯಕ್ಷ ಎಚ್.ಡಿ.ರೇವಪ್ಪ ತಿಳಿಸಿದರು. ಮುಷ್ಕರದಿಂದ ಬಸ್ ಸಂಚಾರ ಸ್ಥಗಿತ ಗೊಂಡರೆ ಸರ್ಕಾರವೇ ಹೊಣೆ. ನ.2ರಿಂದ ಎಲ್ಲ ನೌಕರರು ಶಾಂತಿನಗರದ ಕೆಎಸ್‌ಆರ್'ಟಿಸಿ ಕೇಂದ್ರ ಕಚೇರಿ ಎದುರು ಮುಷ್ಕರಕ್ಕೆ ಕೂರಲಾಗುವುದು ಎಂದು ತಿಳಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.