ಗೌರಿ ಗಣೇಶ್ ಹಬ್ಬಕ್ಕೆ ಊರಿಗೆ ಹೋಗೋರಿಗೆ KSRTC ವಿಶೇಷ ಬಸ್ ಗಳ ವ್ಯವಸ್ಥೆ ಮಾಡಿದ್ದು, ಪ್ರಯಾಣಿಕರು ಮುಂಗಡ ಟಿಕೆಟ್ ಕಾಯ್ದಿರಿಸಿದಲ್ಲಿ ರಿಯಾಯಿತಿ ನೀಡಲಾಗುತ್ತಿದೆ.
ಬೆಂಗಳೂರು, [ಆ.27]: ಮತ್ತೆ ಗಣೇಶ ಚತುರ್ಥಿ ಬಂದಿದೆ. ದಿನಾಂಕ 2/9/2019ರಂದು ಗೌರಿ ಗಣೇಶ್ ಹಬ್ಬದ ಪ್ರಯುಕ್ತ ಪ್ರಯಾಣಿಕರ ಅನುಕೂಲಕ್ಕಾಗಿ ಕೆಎಸ್ಆರ್‌ಟಿಸಿ 1800 ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಮಾಡಿದೆ.
30.8.2019 ಹಾಗೂ 31.8.2019 ರಂದು ಬೆಂಗಳೂರಿನಿಂದ ವಿವಿಧ ಜಿಲ್ಲೆಗಳು ಮತ್ತು ಅಕ್ಕ-ಪಕ್ಕದ ರಾಜ್ಯಗಳಿಗೆ ಈ ಬಸ್‌ಗಳು ಸಂಚಾರ ನಡೆಸಲಿವೆ. ಜತೆಗೆ ರಾಜ್ಯ ಮತ್ತು ಅಂತಾರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ದಿನಾಂಕ 2/9/2019 ರಂದು ವಿಶೇಷ ವಾಹನಗಳು ಸಂಚರಿಸಲಿವೆ ಎಂದು ಸಂಸ್ಥೆ ತಿಳಿಸಿದೆ.
undefined
ಗಣಪನ ನೈವೇದ್ಯಕ್ಕೆ ಹೀಗೆಲ್ಲ ಮಾಡ್ಬಹುದು ಮೋದಕ!
ವಿಶೇಷ ಬಸ್ ಗಳು ಎಲ್ಲೆಲ್ಲಿಂದ ಸಂಚಾರ?
ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ,ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ತಿರುಪತಿ ಮುಂತಾದ ಸ್ಥಳಗಳಿಗೆ ವಿಶೇಷ ಕಾರ್ಯಾಚರಣೆ.
ಮೈಸೂರು ರಸ್ತೆ ಬಸ್ ನಿಲ್ದಾಣದಿಂದ
ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಕಡೆಗೆ ಸಂಚಾರ ಮಾಡಲಿವೆ.
ಪಿಒಪಿ ಗಣೇಶ ರಚನೆ, ಮಾರಾಟ ಮಾಡಿದ್ರೆ ಟ್ರೇಡ್ ಲೈಸೆನ್ಸ್ ರದ್ದು
ಶಾಂತಿನಗರ ನಿಲ್ದಾಣದಿಂದ ಹೊರಡುವ ಬಸ್
ತಮಿಳುನಾಡು ಮತ್ತು ಆಂಧ್ರಪ್ರದೇಶ/ತೆಲಂಗಾಣ ಕಡೆಗೆ ಅಂದರೆ ಮಧುರೈ, ಕುಂಭಕೋಣಂ, ತಿರುಚಿ, ಚಿನ್ನೈ, ಕೊಯಮತ್ತೂರ್ ತಿರುಪತಿ, ವಿಜಯವಾಡ, ಹೈದರಾಬಾದ್ ಮುಂತಾದ ಸ್ಥಳಗಳಿಗೆ ಹೋಗುವ ಪ್ರತಿಷ್ಠಿತ ಸಾರಿಗೆಗಳನ್ನು ಶಾಂತಿನಗರದಲ್ಲಿನ ಬೆಂಗಳೂರು ಕೇಂದ್ರ ಘಟಕ-4 ಮತ್ತು ಘಟಕ-2 ರ ಮುಂಭಾಗದಿಂದ ವಿಶೇಷ ಕಾರ್ಯಾಚರಣೆ ಮಾಡಲಾಗುವುದು,
ಬೆಂಗಳೂರು ನಗರದ ಶ್ರೀ ಬಸವೇಶ್ವರ ಬಸ್ ನಿಲ್ದಾಣ, ವಿಜಯನಗರ, ಜಯನಗರ 4ನೇ ಬ್ಲಾಕ್, ಜಾಲಹಳ್ಳಿ ಕ್ರಾಸ್, ನವರಂಗ್(ರಾಜಾಜಿನಗರ), ಮಲ್ಲೇಶ್ವರಂ 8ನೇ ಅಡ್ಡ ರಸ್ತೆ, ಬನಶಂಕರಿ, ಜೀವನ್ ಭೀಮಾನಗರ, ಐಟಿಐ ಗೇಟ್, ಗಂಗಾನಗರ, ಕೆಂಗೇರಿ ಉಪನಗರ, ಮುಂತಾದ ಸ್ಥಳಗಳಿಂದ ಪ್ರಯಾಣಿಕರ ಒತ್ತಡಕ್ಕನುಗುಣವಾಗಿ ಶಿವಮೊಗ್ಗ, ದಾವಣಗೆರೆ, ತಿರುಪತಿ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ಕುಕ್ಕೆಸುಬ್ರಮಣ್ಯ, ಧರ್ಮಸ್ಥಳ ಮುಂತಾದ ಮಾರ್ಗಗಳಿಗೆ ಹೆಚ್ಚುವರಿ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ.
ಇನ್ನೂ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಸಾರಿಗೆಗಳಿಗೆ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯಗಳನ್ನು ಕಲ್ಪಿಸಲಾಗಿದ್ದು, Www.ksrtc.in ವೆಬ್ ಸೈಟ್ ಮುಖಾಂತರ ಟಿಕೆಟ್ ಬುಕ್ ಮಾಡಬಹುದಾಗಿದೆ.
ಪ್ರಯಾಣಿಕರು ಬಸ್ ನಿಲ್ದಾಣಗಳಿಗೆ ತೆರಳುವ ಮುನ್ನ ಮುಂಗಡ ಕಾಯ್ದಿರಿಸಿದ ಟಿಕೆಟ್ ಗಳ ಮೇಲೆ ನಮೂದಿಸಲಾಗಿರುವ ಪಿಕ್ ಅಪ್ ಪಾಯಿಂಟ್ [ಬಸ್ ನಿಲ್ದಾಣ] ಗಮನಿಸುವಂತೆ ಕೋರಲಾಗಿದೆ.
ಮುಂಗಡ ಟಿಕೆಟ್ ಗೆ ರಿಯಾಯಿತಿ
ಪ್ರಯಾಣಿಕರು ಮುಂಗಡ ಟಿಕೆಟ್ ಕಾಯ್ದಿರಿಸಿದಲ್ಲಿ ಶೇಕಡ 5 ರಷ್ಟು ರಿಯಾಯಿತಿ ಹಾಗೂ ಹೋಗುವ ಮತ್ತು ಬರುವ ಟಿಕೆಟ್ ಅನ್ನು ಒಟ್ಟಿಗೆ ಬುಕ್ ಮಾಡಿದರೆ ಪ್ರಯಾಣ ದರದಲ್ಲಿ ಶೇಕಡ 10 ರಷ್ಟು ರಿಯಾಯಿತಿ ಇದೆ.