ಗಣೇಶ ಹಬ್ಬಕ್ಕೆ ಊರಿಗೆ ಹೋಗೋರಿಗೆ ಗುಡ್ ನ್ಯೂಸ್

By Web DeskFirst Published Sep 8, 2018, 9:12 AM IST
Highlights

ಗಣೇಶ ಹಬ್ಬಕ್ಕೆ ಊರಿಗೆ ಹೋಗೋರಿಗೆ ಇಲ್ಲಿದೆ ಒಂದು ಗುಡ್ ನ್ಯೂಸ್. ನೀವು ಹಬ್ಬಕ್ಕೆ ಊರಿಗೆ ತೆರಳುವವರು ಬಸ್ ಗಾಗಿ ಪರದಾಡಬೇಕಾದ ಅವಶ್ಯಕತೆ ಇಲ್ಲ. ಕೆಎಸ್ ಆರ್ ಟಿಸಿ ಹೆಚ್ಚುವರಿ ಬಸ್ ಗಳನ್ನು ಬಿಡಲು ನಿರ್ಧರಿಸಿದೆ. 

ಬೆಂಗಳೂರು : ಗೌರಿ-ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರು ಬೆಂಗಳೂರಿನಿಂದ ರಾಜ್ಯದ ವಿವಿಧ ಸ್ಥಳ ಹಾಗೂ ಇತರೇ ರಾಜ್ಯಗಳ  ಊರುಗಳಿಗೆ ತೆರಳಲು ಕೆಎಸ್‌ಆರ್‌ಟಿಸಿ ಹೆಚ್ಚುವರಿಯಾಗಿ 1,200 ವಿಶೇಷ ಬಸ್ ವ್ಯವಸ್ಥೆ ಮಾಡಿದೆ. ಸೆ. 11 ಮತ್ತು 12ರಂದು ಬೆಂಗಳೂರಿನಿಂದ, ಸೆ. 16 ರಂದು ಬೆಂಗಳೂರು ಕಡೆಗೆ ವಿಶೇಷ ಬಸ್ ಕಾರ್ಯಾಚರಣೆ ನಡೆಸಲಿದೆ ಎಂದು ಕೆಎಸ್‌ಆರ್‌ಟಿಸಿ ತಿಳಿಸಿದೆ.

ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮ ಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರ ವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ತಿರುಪತಿ ಕಡೆಗೆ ಬಸ್ ಹೊರಡಲಿವೆ. 

ಮೈಸೂರು ರಸ್ತೆ ಸ್ಯಾಟ್‌ಲೈಟ್ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಕಡೆಗೆ ಹಾಗೂ ಶಾಂತಿನಗರ ಟಿಟಿಎಂ ಸಿಯಿಂದ ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ ಕಡೆಗೆ ಹವಾನಿ ಯಂತ್ರಣ ಬಸ್ ಕಾರ್ಯಾಚರಣೆಗೊಳ್ಳಲಿದೆ. 

ಶಾಂತಿನಗರದಲ್ಲಿನ ಬೆಂಗ ಳೂರು ಕೇಂದ್ರ ಘಟಕ- 4 ಮತ್ತು ಘಟಕ- 2 ರ ಮುಂಭಾಗದಿಂದ ವಿಶೇಷ ಬಸ್ ಸೇವೆ ಕಲ್ಪಿಸಲಾಗಿದೆ. ಪೀಣ್ಯ ಬಸವೇಶ್ವರ ಬಸ್ ನಿಲ್ದಾಣ, ವಿಜಯನಗರ, ಜಯನಗರ  4 ನೇ ಬ್ಲಾಕ್, ಜಾಲಹಳ್ಳಿ ಕ್ರಾಸ್, ನವರಂಗ್(ರಾಜಾಜಿನಗರ), ಮಲ್ಲೇಶ್ವರಂ 18ನೇ ಅಡ್ಡ ರಸ್ತೆ, ಬನಶಂಕರಿ, ಜೀವನ್ ಭೀಮಾನಗರ, ಐಟಿಐ ಗೇಟ್, ಗಂಗಾನಗರ, ಕೆಂಗೇರಿ ಉಪನಗರ, ಮುಂತಾದ ಸ್ಥಳಗಳಿಂದ ಪ್ರಯಾಣಿಕರ ಸಂ ಖ್ಯೆಗೆ ಅನುಗುಣವಾಗಿ ಶಿವಮೊಗ್ಗ, ದಾವಣಗೆರೆ, ತಿರುಪತಿ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ಸುಬ್ರಹ್ಮಣ್ಯ, ಧರ್ಮಸ್ಥಳ ಮುಂತಾದ ಮಾರ್ಗಗಳಿಗೆ ಹೆಚ್ಚುವರಿ ಬಸ್ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಕೆಎಸ್‌ಆರ್‌ಟಿಸಿ ತಿಳಿಸಿದೆ. ಹೆಚ್ಚುವರಿ ವಿಶೇಷ ಬಸ್‌ಗಳಲ್ಲೂ ಮುಂ ಗಡವಾಗಿ ಕೆಎಸ್‌ಆರ್‌ಟಿಸಿ ವೆಬ್‌ಸೈಟ್  www.ksrtc.in ಮೂಲಕ ಆಸನ ಕಾಯ್ದಿರಿಸಬಹುದಾಗಿದೆ.

click me!