
ಮಂಗಳೂರು (ಜು. 03): ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ನಾಳೆಯ ದರ್ಶನ ಸಮಯದಲ್ಲಿ ಬದಲಾವಣೆಯಾಗಿದೆ.
ಬೆಳಿಗ್ಗೆ 6.30ರ ಬದಲು 9 ಗಂಟೆಗೆ ದೇವರ ದರ್ಶನ ಆರಂಭವಾಗಲಿದೆ. ನಾಳೆ ದೇವರಿಗೆ ದ್ರವ್ಯಕಲಶಾಭಿಷೇಕ ಮತ್ತು ದೇವಳದ ವತಿಯಿಂದ ಆಶ್ಲೇಷ ಬಲಿ ಸೇವೆ ಇರುವುದರಿಂದ ಭಕ್ತರ ಸಂಖ್ಯೆ ಹೆಚ್ಚಿರುತ್ತದೆ. ಹೀಗಾಗಿ ದರ್ಶನ ಸಮಯವನ್ನು ಬದಲಾವಣೆ ಮಾಡಲಾಗಿದೆ ಎಂದು ದೇವಾಲಯ ಆಡಳಿತ ಮಂಡಳಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ಸುವರ್ಣ ನ್ಯೂಸ್’ಗೆ ಹೇಳಿದ್ದಾರೆ.
ಜು.5 ರಿಂದ ಪ್ರತಿನಿತ್ಯ ಸಂಜೆಯೂ ಶ್ಲೇಷ ಬಲಿ ಸೇವೆ ನಡೆಯಲಿದೆ. ದರ್ಶನಕ್ಕೆ ಬರುವ ಭಕ್ತರು ಬದಲಾದ ದರ್ಶನ ಸಮಯವನ್ನು ಗಮನಿಸಬೇಕು ಎಂದು ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.