
ಮಂಗಳೂರು: ದಕ್ಷಿಣ ಕನ್ನಡದ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನವನ್ನು ಮಠದ ಸುಪರ್ದಿಗೆ ಒಪ್ಪಿಸಬೇಕೆಂಬ ಆಗ್ರಹ ಕೇಳಿ ಬಂದಿದೆ.
ಇಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್, ಪುರಾತನ ದಾಖಲೆಗಳ ಪ್ರಕಾರ ಸುಬ್ರಹ್ಮಣ್ಯ ಮಠಕ್ಕೆ ಸೇರಬೇಕು. ಆದ್ದರಿಂದ ಈ ದೇವಸ್ಥಾನವನ್ನು ಮಠದ ವಶಕ್ಕೆ ಒಪ್ಪಿಸಬೇಕು, ಎಂದು ಒತ್ತಾಯಿಸಿದ್ದಾರೆ.
ಇದನ್ನೂ ವೀಕ್ಷಿಸಿ: ಪ್ರಸಿದ್ಧ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಹೊಸ ವಿವಾದ!
ಈ ನಿಟ್ಟಿನಲ್ಲಿ ಸುಬ್ರಹ್ಮಣ್ಯ ಸ್ವಾಮೀಜಿ ಅವರೊಂದಿಗೆ ಸೆಪ್ಟೆಂಬರ ಮೊದಲ ವಾರದಲ್ಲಿ ಧಾರ್ಮಿಕ ದತ್ತಿ ಇಲಾಖೆ ಅಧಿಕಾರಿಗಳು ಹಾಗೂ ಸಚಿವರನ್ನು ಭೇಟಿ ಮಾಡಿ ದಾಖಲೆಯನ್ನು ಸಲ್ಲಿಸಲಾಗುವುದು ಎಂದು ಮುತಾಲಿಕ್ ಹೇಳಿದ್ದಾರೆ.
ಈ ಬಗ್ಗೆ ದಾಖಲೆಗಳನ್ನು ಮುಂದಿರಿಸಿದ ಅವರು, ದೇವಸ್ಥಾನ ಮತ್ತು ಮಠದ ಮಧ್ಯೆ ಒಡಕು ಸೃಷ್ಟಿಸುವ ಪ್ರಯತ್ನವನ್ನು ಕೆಲವರು ನಡೆಸುತ್ತಿದ್ದಾರೆ. ದೇವಸ್ಥಾನ-ಮಠ ನಡುವೆ ಅವಿನಾಭಾವ ಸಂಬಂಧ ಇದೆ. ಸ್ಥಗಿತಗೊಂಡಿರುವ ಉತ್ಸವಗಳು ಮತ್ತೆ ಮುಂದುವರಿಯಬೇಕು ಎಂದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.