
ದಕ್ಷಿಣ ಕನ್ನಡ(ಮೇ.22): ಪ್ರಸಿದ್ಧ ಯಾತ್ರಾಸ್ಥಳ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಅನಾಹುತ ಸಂಭವಿಸಿದೆ. ಸಿಡಿಲಿನ ರಬಸಕ್ಕೆ ದೇವಾಲಯದ ಗೋಪುರದ ತುದಿ ಕಿತ್ತು ಹೋಗಿದೆ. ಕಳೆದ 1 ವಾರದಿಂದ ಕುಕ್ಕೆಯಲ್ಲಿ ಭಾರೀ ಮಳೆಯ ಆರ್ಭಟ ದಿಂದ ಸಿಡಿಲಿನ ಅಬ್ಬರವೂ ಹೆಚ್ಚಾಗಿದೆ. ಕಳೆದ ಭಾನುವಾರ ಸಿಡಿಲ ಅಬ್ಬರಕ್ಕೆ ಗೋಪುರದ ತುದಿ ಭಾಗ ಕಿತ್ತು ಹೋಗಿದ್ದು, ಭಕ್ತರಲ್ಲಿ ಆತಂಕ ಸೃಷ್ಟಿಸಿದೆ. ಇನ್ನು 2 ದಿನಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಿಡಿಲಿನ ಆರ್ಭಟವೂ ಮಿತಿ ಮೀರುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.