
ಶಿವಮೊಗ್ಗ (ಫೆ.16) : ಮಾಜಿ ಸಚಿವ ಕುಮಾರ್ ಬಂಗಾರಪ್ಪ ಕಾಂಗ್ರೆಸ್ ಪಕ್ಷವನ್ನು ಬಿಡುವ ಸೂಚನೆ ನೀಡಿದ್ದಾರೆ.
ಸೊರಬದಲ್ಲಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡುವ ಸಂದರ್ಭದಲ್ಲಿ ಕುಮಾರ್ ಬಂಗಾರಪ್ಪ ತಮ್ಮನ್ನು ಪಕ್ಷ ನಡೆಸಿ ಕೊಳ್ಳುತ್ತಿರುವ ರೀತಿ ಸರಿಯಾಗಿಲ್ಲ ಎಂದು ಹೇಳುವ ಮೂಲಕ ಕಾಂಗ್ರೆಸ್ ಬಿಡುವ ಸೂಚನೆ ನೀಡಿದ್ದಾರೆ.
ಪಕ್ಷದ ನಡೆಸಿಕೊಲ್ಳುವ ರಿತಿಯಿಂದ ಆತ್ಮ ಗೌರವಕ್ಕೆ ಕುಂದುಂಟ್ಟಾಗಿದ್ದು, ಬದಲಾವಣೆ ಅನಿವಾರ್ಯವಾಗಿದೆ ಎಂದು ಅವರು ಹೇಳಿದ್ದಾರೆ.
ಮಾಜಿ ಸಚಿವರಾಗಿ ಪಕ್ಷಕ್ಕೆ ಹಲವಾರು ವರ್ಷಗಳಿಂದ ದುಡಿದಿದ್ದೇನೆ, ಕ್ಷೇತ್ರದ ಜನತೆ ಹಾಗೂ ಅಭಿಮಾನಿಗಳ ಇಚ್ಛೆಯಂತೆ ಮುಂದಿನ ತೀರ್ಮಾನ ಕೈಗೊಳ್ಳುತ್ತೇನೆಯೆಂದು ಅವರು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.