ಮೈತ್ರಿ ನಾಯಕರಿಗೆ ಶಾಕ್: ಕುಂದಗೋಳದಲ್ಲಿ ಕಮಲ ಹಿಡಿದ ಕೈ ನಾಯಕ

By Web DeskFirst Published May 12, 2019, 2:03 PM IST
Highlights

ಮೈತ್ರಿ ನಾಯಕರಿಗೆ ಸಾಕ್| ಕೈ ಬಿಟ್ಟು ಕಮಲ ಹಿಡಿದ ನಾಯಕ| ಕುಂದಗೋಳದಲ್ಲಿ ಗರಿಗೆದರಿದ ರಾಜಕೀಯ ಬೆಳವಣಿಗೆ

ಧಾರವಾಡ[ಮೇ.12]: ಕುಂದಗೋಳ ವಿಧಾನಸಭೆ ಕ್ಷೇತ್ರದ ಉಪಚುನಾವಣೆ ಏ.19 ರಂದು ನಡೆಯಲಿದೆ. ಈಗಾಗಲೇ ಮತದಾರರನ್ನು ಸೆಳೆಯಲು ರಾಜ್ಯ ನಾಯಕರು ಕಸರತ್ತು ನಡೆಸುತ್ತಿದ್ದಾರೆ. ಹೀಗಿರುವಾಗ ಮೈತ್ರಿ ನಾಯಕರಿಗೆ ಬಿಗ್ ಶಾಕ್ ತಗುಲಿದ್ದು, ಕಾಂಗ್ರೆಸ್ ತಾಲೂಕು ಪಂಚಾಯಿತ್ ಕಾಂಗ್ರೆಸ್ ಸದಸ್ಯ ಬಿಜೆಪಿ ಸೇರ್ಪಡೆಯಾಗಿದ್ದಾರೆ.

ಇಲ್ಲಿನ ತಾಲೂಕು ಪಂಚಾಯಿತಿ ಸದಸ್ಯ ಈಶ್ವರಪ್ಪ ಯಲಿವಾಳ ಕಾಂಗ್ರೆಸ್ ಗೆ ಗುಡ್ ಬೈ ಹೇಳಿ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ತಾಲೂಕು ಪಂಚಾಯಿತಿ ಸದಸ್ಯ ಈಶ್ವರಪ್ಪ ಯಲಿವಾಳ ಸೇರಿದಂತೆ ಸ್ಥಳೀಯ ಕಾಂಗ್ರೆಸ್ ಮುಖಂಡರು ಕಮಲಕ್ಕೆ ಸೇರ್ಪಡೆಯಾಗಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಬಿ.ಎಸ್.ಯಡಿಯೂರಪ್ಪ, ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಲು ಮೈತ್ರಿ ನಾಯಕರು ಸರ್ವ ಪ್ರಯತ್ನ ಮಾಡುತ್ತಿದ್ದಾರೆ. ನಮ್ಮ ಅಭ್ಯರ್ಥಿಯನ್ನು ಗೆಲ್ಲಿಸಲು ನಾವು ಎಲ್ಲಾ ಪ್ರಯತ್ನ ಮಾಡುತ್ತಿದ್ದೇವೆ. ಸಚಿವ ಡಿ.ಕೆ.ಶಿವಕುಮಾರ್ ಹಣ, ಹೆಂಡ ಹಂಚಿ ಚುನಾವಣೆಯಲ್ಲಿ ಗೆಲ್ಲಲು ಹೊರಟಿದ್ದಾರೆ. ನಮ್ಮ ಮುಖಂಡರಿಗೆ ಆಮಿಷವೊಡ್ಡುತ್ತಿದ್ದಾರೆ ಎಂದು ಆರೋಪಿಸಿದರು.

click me!