
ಚೆನ್ನೈ : ತಮಿಳುನಾಡಿನ ಥೇನಿ ಜಿಲ್ಲೆಯ ಕುರಂಗನಿ ಬೆಟ್ಟಕ್ಕೆ ವಿದ್ಯಾರ್ಥಿಗಳು ಟ್ರಕ್ಕಿಂಗ್ ತೆರಳಿದ್ದ ವೇಳೆ ಉಂಟಾದ ಕಾಡ್ಗಿಚ್ಚಿನಲ್ಲಿ ಸಾವನ್ನಪ್ಪಿದವರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ. ಟ್ರಕ್ಕಿಂಗ್’ಗೆ ತೆರಳಿದ್ದ ವಿದ್ಯಾರ್ಥಿನಿಯರ ರಕ್ಷಣೆಗೆ ರಕ್ಷಣಾ ಸಚಿವೆ ನಿರ್ಮಾಲ ಸೀತಾರಾಮನ್ ಅವರಿಗೆ ಈ ಬಗ್ಗೆ ಮಾಹಿತಿ ನೀಡಿದ್ದು, ಬಳಿಕ ರಕ್ಷಣಾ ಕಾರ್ಯಾಚರಣೆಯನ್ನು ಕೈಗೊಳ್ಳಲಾಗಿತ್ತು.
ಭಾನುವಾರ ರಾತ್ರಿ ಇಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಟ್ರಕ್ಕಿಂಗ್ ಹೋಗಿದ್ದ ಅನೇಕ ವಿದ್ಯಾರ್ಥಿಗಳು ಸಿಲುಕಿಕೊಂಡಿದ್ದರು. ಈ ವೇಳೆ ರಾತ್ರಿಯೇ ಕೆಲ ವಿದ್ಯಾರ್ಥಿಗಳು ರಕ್ಷಣೆ ಮಾಡಲಾಗಿತ್ತು. ಅತ್ಯಂತ ಹೆಚ್ಚು ಬೆಂಕಿಯ ಜ್ವಾಲೆ ಆವರಿಸಿಕೊಂಡಿದ್ದು, ಹೆಲಿಕಾಪ್ಟರ್’ನಲ್ಲಿ ತೆರಳಿ ಮೃತದೇಹಗಳನ್ನು ತರಲಾಗಿತ್ತು. ಅಲ್ಲದೇ ಇದೇ ವೇಳೆ ಒಂದು ಹೆಲಿಕಾಪ್ಟರ್ ಕೂಡ ಬೆಂಕಿಯಿಂದ ಹಾನಿಗೊಳಗಾಗಿತ್ತು ಎಂದು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದರು.
ಇನ್ನು ಇಲ್ಲಿ ಮೃತಪಟ್ಟ ವಿದ್ಯಾರ್ಥಿಗಳ ಕುಟುಂಬಕ್ಕೆ ಸೂಕ್ತ ಪರಿಹಾರವನ್ನೂ ನೀಡುವುದಾಗಿಯೂ ಉಪ ಮುಖ್ಯಮಂತ್ರಿ ಪನ್ನೀರ್ ಸೆಲ್ವಂ ಅವರು ಘೋಷಣೆ ಮಾಡಿದ್ದಾರೆ.
ಸ್ಥಳದಲ್ಲಿ 16 ಕಮಾಂಡೋಗಳು, ಭಾರತೀಯ ವಾಯುಪಡೆಯ ಹೆಲಿಕಾಪ್ಟರ್’ಗಳಿಂದ ಕಾರ್ಯಾಚರಣೆ ನಡೆಸಲಾಗುತ್ತಿದೆ. ಅಲ್ಲದೇ ರಕ್ಷಣಾ ಕಾರ್ಯಾಚರಣೆಗೆ ಇನ್ನೊಂದು ಹೆಲಿಕಾಪ್ಟರ್ ಕೂಡ ತೆರಳಲಿದೆ ಎಂದು ಭಾರತೀಯ ವಾಯುಪಡೆ ಅಧಿಕಾರಿಗಳು ಹೇಳಿದ್ದಾರೆ. ಇದುವರೆಗೂ ಸುಮಾರು 27 ಮಂದಿ ವಿದ್ಯಾರ್ಥಿಗಳನ್ನು ಕಾಡಿನಿಂದ ರಕ್ಷಣೆ ಮಾಡಲಾಗಿದೆ ಎಂದು ರಾಜ್ಯದ ಆರೋಗ್ಯ ಸಚಿವರಾದ ಸಿ ವಿಜಯ್ ಭಾಸ್ಕರ್ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.