
ಬೀದರ್(ಅ.20): ಸರ್ಕಾರ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಒಳ್ಳೆಯ ಭವಿಷ್ಯಕ್ಕಾಗಿ ಕೋಟಿ ಕೋಟಿ ಹಣ ಸುರಿಯುತ್ತಿದೆ. ಆದರೆ ಅಧಿಕಾರಿಗಳ ಮತ್ತು ರಾಜಕಾರಣಿಗಳ ದಿವ್ಯ ನಿರ್ಲಕ್ಷ್ಯದಿಂದ ಅಂತಹ ಸವಲತ್ತುಗಳಿಂದ ವಿದ್ಯಾರ್ಥಿಗಳು ವಂಚಿತವಾಗುತ್ತಿದ್ದಾರೆ. ಇದಕ್ಕೆ ಬೀದರ್ ಜಿಲ್ಲೆಯಲ್ಲಿರುವ ಈ ಹಾಸ್ಟಲೇ ಸಾಕ್ಷಿ.
ಪದವಿ ವಿದ್ಯಾರ್ಥಿಗಳಿಗೆ, ವಿದ್ಯಾರ್ಥಿನಿಯರಿಗಾಗಿ ನಿರ್ಮಿಸಿದ ವಸತಿ ನಿಲಯ ಕುಡುಕರ, ಜೂಜುಕೋರರ, ಸಮಾಜ ಘಾತುಕರ ಪಾಲಾಗಿದೆ. ಗುಲ್ಬರ್ಗಾ ವಿವಿ ಸ್ನಾತಕೋತ್ತರ ಕೇಂದ್ರದ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಅನುಕೂಲವಾಗಲೆಂದು, ಸರ್ಕಾರ 2010-11ರಲ್ಲಿ ಬರೋಬ್ಬರಿ 2ಕೋಟಿ 20ಲಕ್ಷ ರೂ. ಖರ್ಚು ಮಾಡಿ ಎರಡೂ ವಸತಿ ನಿಲಯದ ಕಟ್ಟಡಗಳು ನಿರ್ಮಾಣಮಾಡಿ 5 ವಷಗಳೇ ಕಳೆದಿದೆ. ಇನ್ನೂ ಉದ್ಘಾಟನೆಯಾಗಿಲ್ಲ ಬರೀ ಕುಡಿಯುವ ನೀರಿನ ನೆಪಮಾಡಿ 5 ವರ್ಷದಿಂದ ಸ್ಟುಡೆಂಟ್ಗಳ ಉಪಯೋಗಕ್ಕೆ ನೀಡದೆ ನಿರ್ಲಕ್ಷ್ಯ ತೋರಿದ್ದಾರೆ ಅಧಿಕಾರಿಗಳು.
ಇನ್ನೂ ಕೆಲ ದಿನ ಕಳೆದರೆ ಸರ್ಕಾರದ ಕೋಟಿ ಕೋಟಿ ಹಣ ಮಣ್ಣುಪಾಲಾದರೂ ಅಚ್ಚರಿ ಪಡಬೇಕಿಲ್ಲ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.