
ಕಲಬುರಗಿ(ಡಿ.2): ಕಲಬುರಗಿಯಲ್ಲಿ ಪತ್ನಿ ಅಡುಗೆಯಲ್ಲಿ ಎಣ್ಣೆ ಹೆಚ್ಚು ಹಾಕಿದ್ದಾಳೆ ಎಂಬ ಕಾರಣಕ್ಕೆ ಕೋಪಗೊಂಡ ಪತಿ ಮಹಾಶಯ ಹೆಂಡತಿಗೆ ಬೆಂಕಿ ಹಚ್ಚಿದ್ದ ಪೈಶಾಚಿಕ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾಳೆ.
ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕಿನ ನೆಲೋಗಿಯಲ್ಲಿ ಕಳೆದ ನಾಲ್ಕು ದಿನಗಳ ಹಿಂದೆ ಈ ಘಟನೆ ನಡೆದಿತ್ತು. ತೀವ್ರ ಸುಟ್ಟ ಗಾಯಗಳಿಂದ ನರಳುತ್ತಿದ್ದ ಪ್ರೀಯಾಂಕಾ ಇಂದು ಚಿಕಿತ್ಸೆ ಫಲಕಾರಿಯಾಗದೇ ಇಲ್ಲಿನ ಬಸವೇಶ್ವರ ಆಸ್ಪತ್ರೆಯಲ್ಲಿ ಕೊನೆ ಉಸಿರೆಳೆದಿದ್ದಾರೆ.
ಅಡುಗೆಯಲ್ಲಿ ಎಣ್ಣೆ ಜಾಸ್ತಿ ಹಾಕಿದಳು ಎಂಬ ಒಂದೇ ಕಾರಣಕ್ಕೆ ಗಂಡ ಕುದಿಯುವ ಎಣ್ಣೆಯನ್ನ ಪತ್ನಿಯ ಮುಖಕ್ಕೆ ಎರಚಿದ್ದ. ಅಷ್ಟೇ ಅಲ್ಲದೇ ನೋವಿನಿಂದ ಕೂಗಾಡುತ್ತಿದ್ದ ಪತ್ನಿಯ ಮೈಮೇಲೆ ಸೀಮೆ ಎಣ್ಣೆ ಸುರಿದು ಕೊಲೆಗೆ ಯತ್ನಿಸಿದ್ದ ಪತಿ ಭೀಮಾಶಂಕರ.
ಕಟುಕ ಗಂಡನನ್ನ ಈಗಾಗಲೇ ನೆಲೋಗಿ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದು, ತಂದೆಯ ನೀಚ ಕೃತ್ಯದಿಂದ ಹದಿನೆಂಟು ತಿಂಗಳ ಹೆಣ್ಣು ಮಗು ತಾಯಿಯನ್ನ ಕಳೆದುಕೊಂಡು ಅನಾಥವಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.