
ನಂಜನಗೂಡು(ಜ.09):ಮಹಿಳೆಯೋರ್ವಳ ಶವ ಕಳೆದ 2 ದಿನಗಳಿಂದಲೂ ಕೂಡ ಮನೆಯಲ್ಲಿಯೇ ನೇತಾಡುತ್ತಿರುವ ಪ್ರಕರಣವೊಂದು ಮೈಸೂರು ಜಿಲ್ಲೆಯ ನಂಜನಗೂಡಿನ ಹಲ್ಲರೆ ಗ್ರಾಮದಲ್ಲಿ ಬೆಳಕಿಗೆ ಬಂದಿದೆ.
ಗೃಹಿಣಿ ಲತಾ ಎಂಬಾಕೆಯ ಕೊಲೆ ನಡೆದಿದ್ದು, ಆಕೆಯನ್ನು ಕೊಲೆ ಮಾಡಿ ಪತಿ ಶಿವು ಸ್ಥಳದಿಂದ ನಾಪತ್ತೆಯಾಗಿದ್ದಾರೆ ಎಂದು ಆರೋಪಿಸಲಾಗುತ್ತಿದೆ. ಮೂರು ವರ್ಷಗಳ ಹಿಂದೆ ಲತಾ ಹಾಗೂ ಶಿವು ಅವರ ವಿವಾಹ ನಡೆದಿತ್ತು. ಶಿವು ತಮ್ಮ ಮಗಳನ್ನು ಕೊಲೆ ಮಾಡಿ ನೇಣಿಗೇರಿಸಿದ್ದಾನೆ ಎಂದು ಲತಾ ಪೋಷಕರು ಆರೋಪಿಸುತ್ತಿದ್ದಾರೆ. ಅಲ್ಲದೇ ಸ್ಥಳಕ್ಕೆ ತಹಶೀಲ್ದಾರ್ ಬರುವವರೆಗೂ ಕೂಡ ಶವವನ್ನು ಕೆಳಕ್ಕೆ ಇಳಿಸುವುದಿಲ್ಲ ಎಂದು ಹೇಳುತ್ತಿದ್ದಾರೆ.
ಇನ್ನು ಇತ್ತ ನಂಜನಗೂಡು ಗ್ರಾಮಾಂತರ ಪೊಲೀಸರು ಯಾವುದೇ ಪ್ರಕರಣವನ್ನೂ ಕೂಡ ದಾಖಲಿಸಿಕೊಂಡಿಲ್ಲ. ಪೊಲೀಸರು ರಾಜಕೀಯ ಒತ್ತಡದಿಂದ ಪ್ರಕರಣವನ್ನು ದಾಖಲಿಸಿಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ ಎಂದು ಮೃತ ಮಹಿಳೆಯ ಪೋಷಕರು ಆರೋಪಿಸುತ್ತಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.