ಬೆಂಗಳೂರಿನಲ್ಲಿ ಮುಂದುವರಿದ ಕಾಮುಕರ ಅಟ್ಟಹಾಸ; ಯುವತಿಗೆ ಕಿಸ್ ಕೊಟ್ಟು ಪರಾರಿ

By Suvarna Web DeskFirst Published Jun 19, 2017, 5:28 PM IST
Highlights

ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ ಯುವತಿ ಮಧ್ಯರಾತ್ರಿ ಕೆಲಸ ಮುಗಿಸಿಕೊಂಡು ಕ್ಯಾಬ್​’ನಿಂದ ಇಳಿದು ಮನೆಗೆ ನಡೆದುಕೊಂಡು ಹೋಗುತ್ತಿದ್ದಳು. ಈ ವೇಳೆ ಕಪ್ಪು ಬಣ್ಣದ ಟೀ ಶರ್ಟ್ ಧರಿಸಿ ಬಂದಿದ್ದ ಇಬ್ಬರು ಯುವಕರು, ಆಕೆಗೆ ಅಡ್ಡಗಟ್ಟಿ ಕಿಸ್​ ಕೊಟ್ಟು ಪರಾರಿಯಾಗಿದ್ದಾರೆ.

ಬೆಂಗಳೂರು:  ಬೆಂಗಳೂರಿನಲ್ಲಿ ಕಾಮುಕರ ಅಟ್ಟಹಾಸ ಮುಂದುವರೆದಿದೆ. ಜೀವನ್​ ಭೀಮಾ ನಗರದಲ್ಲಿ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿಯೊಬ್ಬಳಿಗೆ ಕಾಮುಕರಿಬ್ಬರು ಕಿಸ್ ಕೊಟ್ಟು ಪರಾರಿಯಾಗಿದ್ದಾರೆ.

ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ ಯುವತಿ ಮಧ್ಯರಾತ್ರಿ ಕೆಲಸ ಮುಗಿಸಿಕೊಂಡು ಕ್ಯಾಬ್​’ನಿಂದ ಇಳಿದು ಮನೆಗೆ ನಡೆದುಕೊಂಡು ಹೋಗುತ್ತಿದ್ದಳು. ಈ ವೇಳೆ ಕಪ್ಪು ಬಣ್ಣದ ಟೀ ಶರ್ಟ್ ಧರಿಸಿ ಬಂದಿದ್ದ ಇಬ್ಬರು ಯುವಕರು, ಆಕೆಗೆ ಅಡ್ಡಗಟ್ಟಿ ಕಿಸ್​ ಕೊಟ್ಟು ಪರಾರಿಯಾಗಿದ್ದಾರೆ.

ಘಟನೆಯಿಂದ ಯುವತಿ ಬೆಚ್ಚಿ ಬಿದ್ದಿದ್ದು, ಜೀವನ ಭೀಮಾನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ. ಘಟನೆ ನಡೆದ ಸ್ಥಳದಲ್ಲಿದ್ದ ಸಿಸಿಟಿವಿ ದೃಶ್ಯಗಳನ್ನು ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

click me!