
ಪಾಟ್ನಾ(ಜೂ.11): ರಾಷ್ಟ್ರೀಯ ಜನತಾದಳದ ಮುಖ್ಯಸ್ಥ, ಮಾಜಿ ಕೇಂದ್ರ ಸಚಿವ ಲಾಲೂ ಪ್ರಸಾದ್ ಯಾದವ್ ತಮ್ಮ ನಿವಾಸದಲ್ಲಿಂದು 70ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡರು.
ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಲಾಲು ಅಧಿಕೃತ ನಿವಾಸಕ್ಕೆ ಭೇಟಿ ನೀಡಿ ಶುಭಕೋರಿದ್ದು ಮಾತ್ರವಲ್ಲದೇ ಮುಂಬರುವ ಲೋಕಸಭಾ ಚುನಾವಣೆಯ ಬಗ್ಗೆ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.
ಈ ವೇಳೆ ಮಾತನಾಡಿದ ಲಾಲು ಪ್ರಸಾದ್ ಯಾದವ್, ನಾವೆಲ್ಲ ಒಂದಾಗಿದ್ದು, ನಮ್ಮಲ್ಲಿ ಯಾವುದೇ ಭಿನ್ನಮತವಿಲ್ಲ. ಬಿಜೆಪಿಯನ್ನು ಮಣಿಸುವ ಸಲುವಾಗಿ ಬಿಹಾರ ಸೇರಿದಂತೆ ದೇಶದಾದ್ಯಂತ ಬಿಜೆಪಿಯೇತರ ಪಕ್ಷಗಳೊಡನೆ ಮೈತ್ರಿಗೆ ಸಿದ್ದ ಎಂದ ಅವರು, ಆಗಸ್ಟ್'ನಲ್ಲಿ ಒಂದು ಸಮಾವೇಶವನ್ನು ಆಯೋಜಿಸಿದ್ದು ಎಲ್ಲಾ ಬಿಜೆಪಿಯೇತರ ಹಿರಿಯ ನಾಯಕರನ್ನು ಆಹ್ವಾನಿಸಿದ್ದೇನೆ ಎಂದು ಹೇಳಿದ್ದಾರೆ.
ಲಾಲು ಪ್ರಸಾದ್ ಕೇಕ್ ಕತ್ತರಿಸುವ ವೇಳೆ ಅವರ ಪತ್ನಿ ಮಾಜಿ ಮುಖ್ಯಮಂತ್ರಿ ರಾಬ್ಡಿ ದೇವಿ, ಕಿರಿಯ ಮಗ ಹಾಗೂ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಹಾಗೂ ಕುಟುಂಬದ ಸದಸ್ಯರು ಹಾಜರಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.