ಶ್ರೀ ರಾಮಚಂದ್ರಾಪುರ ಮಠದಿಂದ ಸಿಎ ಸೈಟ್‌ ಒತ್ತುವರಿ: ಪರಿಶೀಲನೆಗೆ ಡೀಸಿಗೆ ಸೂಚನೆ

By Suvarna Web DeskFirst Published Jun 9, 2017, 10:15 AM IST
Highlights

ಹೊಸನಗರದ ಶ್ರೀ ರಾಮಚಂದ್ರಾಪುರ ಮಠÜ ಬೆಂಗಳೂರಿನ ಗಿರಿನಗರದಲ್ಲಿ ಉದ್ಯಾನಕ್ಕೆ ಮೀಸಲಿಟ್ಟಜಾಗವನ್ನು (ಸಿ.ಎ. ನಿವೇಶನ) ಒತ್ತುವರಿ ಮಾಡಲಾಗಿದೆ ಎಂಬ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಹಿನ್ನೆಲೆಯಲ್ಲಿ ಸ್ಥಳ ಪರಿಶೀಲನೆ ನಡೆಸಿ ವರದಿ ಸಲ್ಲಿಸುವಂತೆ ಬೆಂಗಳೂರು ನಗರ ಜಿಲ್ಲಾಧಿಕಾರಿಗೆ ಹೈಕೋರ್ಟ್‌ ಗುರುವಾರ ನಿರ್ದೇಶಿಸಿದೆ.

ಬೆಂಗಳೂರು; ಹೊಸನಗರದ ಶ್ರೀ ರಾಮಚಂದ್ರಾಪುರ ಮಠÜ ಬೆಂಗಳೂರಿನ ಗಿರಿನಗರದಲ್ಲಿ ಉದ್ಯಾನಕ್ಕೆ ಮೀಸಲಿಟ್ಟಜಾಗವನ್ನು (ಸಿ.ಎ. ನಿವೇಶನ) ಒತ್ತುವರಿ ಮಾಡಲಾಗಿದೆ ಎಂಬ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಹಿನ್ನೆಲೆಯಲ್ಲಿ ಸ್ಥಳ ಪರಿಶೀಲನೆ ನಡೆಸಿ ವರದಿ ಸಲ್ಲಿಸುವಂತೆ ಬೆಂಗಳೂರು ನಗರ ಜಿಲ್ಲಾಧಿಕಾರಿಗೆ ಹೈಕೋರ್ಟ್‌ ಗುರುವಾರ ನಿರ್ದೇಶಿಸಿದೆ.

ರಾಮಚಂದ್ರಾಪುರ ಮಠವು ಗಿರಿನಗರದಲ್ಲಿ ಬಿಬಿಎಂಪಿಯ ಉದ್ಯಾನವಕ್ಕೆ ಮೀಸಲಿಟ್ಟಿದ್ದ 2600 ಚದರ ಅಡಿ ನಿವೇಶವನ್ನು ಒತ್ತುವರಿ ಮಾಡಿದೆ. ಹೀಗಾಗಿ ಒತ್ತುವರಿ ತೆರವುಗೊಳಿಸಲು ಬಿಬಿಎಂಪಿ ಹಾಗೂ ನಗರಾಭಿವೃದ್ಧಿ ಇಲಾಖೆಗೆ ನಿರ್ದೇಶಿಸುವಂತೆ ಕೋರಿ ಪವನ ಪ್ರಸಾದ್‌ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎಸ್‌.ಕೆ. ಮುಖರ್ಜಿ ಹಾಗೂ ನ್ಯಾಯಮೂರ್ತಿ ಪಿ.ಎಸ್‌. ದಿನೇಶ್‌ಕುಮಾರ್‌ ಅವರಿದ್ದ ವಿಭಾಗೀಯ ಈ ಸೂಚನೆ ನೀಡಿದೆ.

ಪ್ರಕರಣಕ್ಕೆ ಸಂಬಂಧಿಸಿದ ಎಲ್ಲರ ಸಮ್ಮುಖದಲ್ಲಿ ಬೆಂಗಳೂರು ನಗರ ಜಿಲ್ಲಾಧಿಕಾರಿಯು ರಾಮಚಂದ್ರಾಪುರ ಮಠವು ಒತ್ತುವರಿ ಮಾಡಿದೆ ಎನ್ನಲಾದ ಉದ್ಯಾನ ಜಾಗದ ಪರಿಶೀಲನೆ ನಡೆಸಿ, ಅಲ್ಲಿ ಒತ್ತುವರಿಯಾಗಿದೆಯೇ? ಅಥವಾ ಇಲ್ಲವೇ? ಎಂಬುದರ ಕುರಿತು ನ್ಯಾಯಾಲಯಕ್ಕೆ ವರದಿ ಸಲ್ಲಿಸಬೇಕು ಎಂದು ನ್ಯಾಯಪೀಠ ನಿರ್ದೇಶಿಸಿತು. ಬಳಿಕ ವಿಚಾರಣೆಯನ್ನುಎಂಟು ವಾರ ಮುಂದೂಡಿತು.

click me!