
ಬೆಂಗಳೂರು(ಅ.19): ತೀವ್ರ ವಿವಾದ ಸೃಷ್ಟಿಸುವುದರೊಂದಿಗೆ ಆಕ್ರೋಶಕ್ಕೆ ಕಾರಣವಾಗಿದ್ದ ದರ್ಶನ್ ಮನೆ ಹಾಗೂ ಎಸ್ ಎಸ್ ಆಸ್ಪತ್ರೆ ಒತ್ತುವರಿ ತೆರವು ವಿಚಾರಕ್ಕೆ ತೆರೆ ಎಳೆಯುವ ಸಮಯ ಎದುರಾಗಿದೆ.
ಈ ಕುರಿತಾಗಿ ಸುವರ್ಣ ನ್ಯೂಸ್'ಗೆ ಹೇಳಿಕೆ ನೀಡಿರುವ ಜಿಲ್ಲಾಧಿಕಾರಿ ಶಂಕರ್, 'ಅ.22ಕ್ಕೆ ದರ್ಶನ್ ನಿವಾಸ ಮತ್ತು SS ಆಸ್ಪತ್ರೆ ಒತ್ತುವರಿ ತೆರವು ಕಾರ್ಯಾಚರಣೆ ನಡೆಸುತ್ತೇವೆ. ಒತ್ತುವರಿ ಜಾಗದಲ್ಲಿ ನಿರ್ಮಿಸಿರುವ ದರ್ಶನ್ ಮನೆ ಹಾಗೂ ಆಸ್ಪತ್ರೆಯನ್ನು ನಾವು ಧ್ವಂಸಗೊಳಿಸುವುದಿಲ್ಲ. ಆದರೆ ಈ ಒತ್ತುವರಿ ಜಾಗವನ್ನು ಸರ್ಕಾರದ ವಶಕ್ಕ ಪಡೆಯಲಾಗುವುದು ಎಂದಿದ್ದಾರೆ.
ಐಡಿಯಲ್ ಹೋಮ್ ಒತ್ತುವರಿ ತೆರವು ಹಿನ್ನೆಲೆಯಲ್ಲಿ, ಇಲ್ಲಿನ 7 ಎಕರೆ 31 ಗುಂಟೆಯನ್ನು ಸರ್ಕಾರದ ಜಾಗ ಎಂದು ನಾಮಫಲಕ ಹಾಕಿ ಒತ್ತುವರಿ ವಶಕ್ಕೆ ಪಡೆಯಲಾಗುವುದು. ಇನ್ನು ಒತ್ತುವರಿದಾರರಿಗೆ ಚಿರಾಸ್ತಿ ಖಾಲಿ ಮಾಡಲು 2 ದಿನ ಅವಕಾಶ ನೀಡಲಾಗುವುದು ಎಂದೂ ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಕಟ್ಟಡಗಳ ಧ್ವಂಸವಿಲ್ಲ, ಆದರೆ ಸರ್ಕಾರಿ ಜಾಗವೆಂದು ಘೋಷಣೆ
ಈಗಾಗಲೇ ರಾಜಕಾಲುವೆ ಮೇಲಿರುವ ಕಟ್ಟಡಗಳನ್ನು ಧ್ವಂಸಗೊಳಿಸಲು ಸರ್ಕಾರ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದೆ. ಈ ಅನ್ವಯ ನಟ ದರ್ಶನ್ ಮನೆ ಹಾಗೂ ಎಸ್. ಎಸ್ ಆಸ್ಪತ್ರೆ ಬಿ ಖರಾಬು ಭೂಮಿಯಲ್ಲಿ ಬರುತ್ತದೆ. ಹೀಗಾಗಿ ಒತ್ತುವರಿ ತೆರವು ಖರ್ಚು ಮತ್ತು ಪರಿಸ್ಥಿತಿಯನ್ನು ನಿಯಂತ್ರಿಸುವ ಸಲುವಾಗಿ ದರ್ಶನ್ ಮನೆ ಹಾಗೂ ಎಸ್.ಎಸ್ ಆಸ್ಪತ್ರೆಯನ್ನು ಸರ್ಕಾರಿ ಭೂಮಿ ಎಂದು ಘೋಷಿಸಲಾಗುತ್ತದೆ. ಮುಂದೆ ಈ ಕಟ್ಟಡಗಳನ್ನು ಸರ್ಕಾರಿ ಕಚೇರಿಗಳನ್ನಾಗಿ ಮಾರ್ಪಾಡು ಮಾಡಲಾಗುತ್ತದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.