
ಕಾರವಾರ (ಅ.11): ಕಾರವಾರ ತಾಲೂಕಿನ ಮುದಗಾ ಗುಡ್ಡ ಪ್ರದೇಶದಲ್ಲಿ ಭಾರೀ ಮಳೆಗೆ ಮಣ್ಣು ಕುಸಿದ ಪರಿಣಾಮ ರಾಷ್ಟ್ರೀಯ ಹೆದ್ದಾರಿ 66ರಲ್ಲಿ 5 ಗಂಟೆಗಳ ಕಾಲ ಸಂಚಾರ ಅಸ್ತವ್ಯಸ್ತವಾಗಿತ್ತು.
ಬಳಿಕ ಜೆಸಿಬಿ ಯಂತ್ರದೊಂದಿಗೆ ಬಂದ ಪೊಲೀಸರು ಹೆದ್ದಾರಿಯಲ್ಲಿ ಬಿದ್ದ ಮಣ್ಣನ್ನು ತೆರವುಗೊಳಿಸಿದ್ದಾರೆ.
ರಾಷ್ಟ್ರೀಯ ಹೆದ್ದಾರಿ 66 ಸಂಪೂರ್ಣ ಸ್ಥಗಿತಗೊಂಡಿದ್ದರಿಂದ ಮಂಗಳೂರು ಗೋವಾ ಹಾಗೂ ಕಾರವಾರ ಹುಬ್ಬಳ್ಳಿ ನಡುವಿನ ಸಂಚಾರ ಅಸ್ತವ್ಯಸ್ತವಾಗಿತ್ತು.
5 ಗಂಟೆಗಳ ಕಾಲ ಹೆದ್ದಾರಿಯಲ್ಲಿ ಸಂಚಾರ ಸ್ಥಗಿತಗೊಂಡಿದ್ದರಿಂದ ಪ್ರಯಾಣಿಕರು ತೊಂದರೆ ಅನುಭವಿಸಿದರು.
ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಚತುಷ್ಪಥ ಕಾಮಗಾರಿ ಗುತ್ತಿಗೆ ಪಡೆದ ಐ ಆರ್ ಬಿ ಕಂಪನಿಯ ಅವೈಜ್ಞಾನಿಕ ಕಾಮಗಾರಿಯಿಂದಾಗಿ ಮಣ್ಣು ಕುಸಿಯುತ್ತಿದೆ ಎನ್ನಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.