
ಕಲಬುರಗಿ : ರಾಜ್ಯದಲ್ಲಿ ಕಳೆದ ವಾರ ಅಸ್ತಿತ್ವಕ್ಕೆ ಬಂದಿರುವ ಮೈತ್ರಿಕೂಟ ಸರ್ಕಾರದಲ್ಲಿ ಸಚಿವ ಸಂಪುಟ ಈಗಲೂ ಕಗ್ಗಾಂಟಾಗಿ ಉಳಿದಿದೆ. ಉಭಯ ಪಕ್ಷಗಳ ಅನುಭವಿ ಶಾಸಕರು ಮಂತ್ರಿಹುದ್ದೆಗೆ ಭಾರೀ ಪೈಪೋಟಿ ನಡೆಸುತ್ತಿದ್ದು, ಇದೀಗ ಕಾಂಗ್ರೆಸ್ ಶಾಸಕಿ ಹಾಗೂ ದಿ. ಖಮರುಲ್ ಇಸ್ಲಾಮ್ ಪತ್ನಿ ಕನೀಜ್ ಫಾತಿಮಾ ಕೂಡಾ ‘ಮಂತ್ರಿ ಸ್ಥಾನ’ದ ರೇಸ್‌ಗೆ ಧುಮುಕಿದ್ದಾರೆ.
ಕಲಬುರಗಿಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಕನೀಜ್ ಫಾತಿಮಾ , ನಾನೂ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದೇನೆ, ರಾಜ್ಯದಲ್ಲಿಯೇ ವಿಧಾನಸಭೆಗೆ ಆಯ್ಕೆಯಾಗಿರುವ ಮುಸ್ಲಿಂ ಮಹಿಳಾ ಸದಸ್ಯೆ ನಾನಾಗಿದ್ದೇನೆ ಹೀಗಾಗಿ ಸಚಿವ ಸ್ಥಾನ ನೀಡುವಂತೆ ಒತ್ತಾಯ ಮಾಡ್ತಿನಿ, ಎಂದಿದ್ದಾರೆ.
ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರಿಗೂ ನನಗೂ ಸಚಿವ ಸ್ಥಾನದ ನೀಡಿದ್ರೂ ಸ್ವಾಗತ, ಈ ಕುರಿತು ಸಂಸದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಸಚಿವ ಸ್ಥಾನ ನೀಡುವಂತೆ ಮನವಿ ಮಾಡುತ್ತೇನೆ, ಸಚಿವ ಸ್ಥಾನ ನೀಡುವ ಬಗ್ಗೆ ನನಗೆ ಹೈಕಮಾಂಡ್ ಮೇಲೆ ನಂಬಿಕೆ ಇದೆ, ಎಂದು ಕನೀಜ್ ಫಾತಿಮಾ ಹೇಳಿದ್ದಾರೆ.
6 ಬಾರಿ ಶಾಸಕರಾಗಿ, ಸಚಿವರಾಗಿ ಸೇವೆ ಸಲ್ಲಿಸಿದ್ದ ಖಮರುಲ್ ಇಸ್ಲಾಮ್ ಕಳೆದ ಸಪ್ಟಂಬರ್‌ನಲ್ಲಿ ನಿಧನಹೊಂದಿದ್ದು, ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಲಬುರಗಿ ಉತ್ತರದಿಂದ ಕಾಂಗ್ರೆಸ್ ಅವರ ಪತ್ನಿ ಕನೀಜ್ ಫಾತಿಮಾರನ್ನು ಕಣಕ್ಕಿಳಿಸಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.