RSS ಕಾರ್ಯಕರ್ತ ಶರತ್ ಮಡಿವಾಳ ಶವಯಾತ್ರೆ: ಉದ್ರಿಕ್ತರಿಂದ ಕಲ್ಲು ತೂರಾಟ, ಪೊಲೀಸರಿಂದ ಲಘು ಲಾಠಿ ಪ್ರಹಾರ

Published : Jul 08, 2017, 01:35 PM ISTUpdated : Apr 11, 2018, 01:04 PM IST
RSS ಕಾರ್ಯಕರ್ತ ಶರತ್ ಮಡಿವಾಳ ಶವಯಾತ್ರೆ: ಉದ್ರಿಕ್ತರಿಂದ ಕಲ್ಲು ತೂರಾಟ, ಪೊಲೀಸರಿಂದ ಲಘು ಲಾಠಿ ಪ್ರಹಾರ

ಸಾರಾಂಶ

ಕರಾವಳಿ ಪ್ರದೇಶದಲ್ಲಿ ಕೋಮುಗಲಭೆ ಬೂದಿ ಮುಚ್ಚಿದ ಕೆಂಡದಂತಿದೆ. ಜುಲೈ 4ರಂದು  ದುಷ್ಕರ್ಮಿಗಳಿಂದ ಹಲ್ಲೆಗೆ ಒಳಗಾಗಿದ್ದ ಶರತ್ ಮಡಿವಾಳ ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ರಾತ್ರಿ ಸಾವನ್ನಪ್ಪಿದ್ದರು. ಇಂದು ಬೆಳಿಗ್ಗೆ ಮಂಗಳೂರಿನ ಎ. ಜೆ ಆಸ್ಪತ್ರೆಯಿಂದ ಅಂತಿಮ ಕ್ರಿಯೆಗಾಗಿ ಅವರ ಮೃತದೇಹವನ್ನು ಸ್ವಗ್ರಾಮ ಸಜಿಪಕ್ಕೆ ತರಲಾಗುತ್ತಿತ್ತು.

ಮಂಗಳೂರು(ಜು.08): ಕರಾವಳಿ ಪ್ರದೇಶದಲ್ಲಿ ಕೋಮುಗಲಭೆ ಬೂದಿ ಮುಚ್ಚಿದ ಕೆಂಡದಂತಿದೆ. ಜುಲೈ 4ರಂದು  ದುಷ್ಕರ್ಮಿಗಳಿಂದ ಹಲ್ಲೆಗೆ ಒಳಗಾಗಿದ್ದ ಶರತ್ ಮಡಿವಾಳ ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ರಾತ್ರಿ ಸಾವನ್ನಪ್ಪಿದ್ದರು. ಇಂದು ಬೆಳಿಗ್ಗೆ ಮಂಗಳೂರಿನ ಎ. ಜೆ ಆಸ್ಪತ್ರೆಯಿಂದ ಅಂತಿಮ ಕ್ರಿಯೆಗಾಗಿ ಅವರ ಮೃತದೇಹವನ್ನು ಸ್ವಗ್ರಾಮ ಸಜಿಪಕ್ಕೆ ತರಲಾಗುತ್ತಿತ್ತು.

ಇವರ ಶವಯಾತ್ರೆಯ ಸಂದರ್ಭದಲ್ಲಿ ಶಾಂತಿ ಕದಡುವ ಯಾವುದೇ ಘಟನೆಗಳಾಗಬಾರದೆಂಬ ದೃಷ್ಟಿಯಿಂದ ಪೊಲೀಸ್ ವ್ಯವಸ್ಥೆ ಮಾಡಲಾಗಿತ್ತು. ಆದರೆ ಇವರ ಶವಯಾತ್ರೆ ಬಿ.ಸಿ ರೋಡ್'ಗೆ ತಲುಪುತ್ತಿದ್ದಂತೆಯೇ ಉದ್ರಿಕ್ತಗೊಂಡ ಯುವಕರು ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಇತ್ತ ಈ ಉದ್ರಿಕ್ತರನ್ನು ತಡೆಯಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ.  

ಉದ್ರಿಕ್ತರಿಂದ ಕಲ್ಲು ತೂರಾಟದಿಂದಾಗಿ ಕಾರು, ಆಟೋ ರಿಕ್ಷಾ ಸೇರಿದಂತೆ ಹಲವಾರು ವಾಹನಗಳ ಗಾಜು ಪುಡಿಯಾಗಿವೆ. ಕಲ್ಲು ತೂರಾಟ ನಡೆಸಿದ ಯುವಕರಲ್ಲಿ ಇಬ್ಬರನ್ನು ಪೊಲೀಸರು ಈಗಾಗಲೇ ಬಂಧಿಸಿದ್ದು, ಪರಿಸ್ಥಿತಿ ಹತೋಟಿಗೆ ತರುವಲ್ಲಿ ಯಶಸ್ವಿಯಾಗಿದ್ದಾರೆ.

 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗ್ರೀನ್ ಕಾರ್ಡ್ ಸಂದರ್ಶನದ ವೇಳೆ 30 ವರ್ಷಗಳಿಂದ ಅಮೆರಿಕಾದಲ್ಲಿ ವಾಸವಿದ್ದ ಭಾರತೀಯ ಮಹಿಳೆಯ ಬಂಧನ
ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?