
ಬೆಂಗಳೂರು (ನ.30): ಇನ್ನು ಖಾಸಗಿ ಕ್ಷೇತ್ರದಲ್ಲಿ ಕನ್ನಡಿಗರಿಗೆ ಮೀಸಲು ವಿಚಾರಕ್ಕೆ ಸಂಬಂಧಿಸಿದಂತೆ ಕಾನೂನು ತಿದ್ದುಪಡಿಗೆ ಕಾನೂನು ಇಲಾಖೆಗೆ ಒಪ್ಪಿಗೆ ನೀಡಲಾಗಿದೆ.
ಈ ಬಗ್ಗೆ ಕಾನೂನು ಸಚಿವ ಟಿ.ಬಿ. ಜಯಚಂದ್ರ ಜತೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ನಡೆಸಿದ ಮಾತುಕತೆ ಫಲಪ್ರದವಾಗಿದೆ. ಕರ್ನಾಟಕದಲ್ಲಿ ಸ್ಥಾಪನೆಯಾಗುವ ಎಲ್ಲ ಕಾರ್ಖಾನೆಗಳಲ್ಲಿ ಶೇ.100 ರಷ್ಟು ಮೀಸಲು ಸಿಗುತ್ತದೆ. ಜೊತೆಗೆ ಕನ್ನಡಿಗರಿಗೆ ಉದ್ಯೋಗ ಮೀಸಲು ಕಾನೂನು ತಿದ್ದುಪಡಿಗೆ ಒಪ್ಪಿಗೆ ನೀಡಲಾಗಿದೆ.
ಐಟಿ ಉದ್ಯಮ ಹೊರತುಪಡಿಸಿ ಎಲ್ಲ ಉದ್ಯಮಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಸಿಗಲಿದ್ದು, ಕರ್ನಾಟಕದಲ್ಲಿ ಹುಟ್ಟಿರಬೇಕು. ಇಲ್ಲವೇ 15 ವರ್ಷಗಳಿಂದ ಕರ್ನಾಟಕದ ನಿವಾಸಿಯಾಗಿರಬೇಕು, ಅಲ್ಲದೆ ವಿಕಲಚೇತನರಿಗೆ ಶೇ 3ರಷ್ಟು ಹುದ್ದೆ ನೀಡುವುದು ಚರ್ಚೆಯಾಗಿದೆ. ಈ ಬಗ್ಗೆ ಮುಂದಿನ ಸಂಪುಟ ಸಭೆಯಲ್ಲಿ ಮಂಡಿಸಲು ಕಾನೂನು ಇಲಾಖೆ ಒಪ್ಪಿಗೆ ನೀಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.