
ನವದೆಹಲಿ (ಆ.30): ಮಾಲೆಗಾಂವ್ ಸ್ಪೋಟ ಪ್ರಕರಣದಲ್ಲಿ ಕೆಲದಿನಗಳ ಹಿಂದೆ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಲೆಫ್ಟಿನೆಂಟ್ ಕಲೋನಿಲ್ ಶ್ರೀಕಾಂತ್ ಪ್ರಸಾದ್ ಪುರೋಹಿತ್ ಸದ್ಯದಲ್ಲೇ ಸೇನೆಯನ್ನು ಸೇರಲಿದ್ದಾರೆ. 9 ವರ್ಷಗಳ ನಂತರ ಮತ್ತೆ ಸೇನೆ ಸೇರಲು ಉತ್ಸುಕನಾಗಿದ್ದೇನೆ ಎಂದು ಶ್ರೀಕಾಂತ್ ಹೇಳಿದ್ದಾರೆ. ಸೇನಾ ಸಮವಸ್ತ್ರವನ್ನು ಧರಿಸಿರುವ ಮಿಂಚುತ್ತಿರುವ ಫೊಟೋಗಳು ಲಭ್ಯವಾಗಿವೆ.
ಜೈಲಿನಿಂದ ಬಿಡುಗಡೆಯಾದ ಬಳಿಕ ಪುರೋಹಿತ್’ರವರನ್ನು ಸೇನಾ ತುಕಡಿಗೆ ಸೇರಿಸಿಕೊಳ್ಳಲಾಗುವುದು. ಆದರೆ ಯಾವುದೇ ಕರ್ತವ್ಯವನ್ನು ನಿರ್ವಹಿಸಿಲು ವಹಿಸುವುದಿಲ್ಲ. ಸುಪ್ರೀಂಕೋರ್ಟ್ ನೀಡಿದ ಶರತ್ತು ಬದ್ಧ ಜಾಮೀನಿನ ಪ್ರತಿಯನ್ನು ಅಧ್ಯಯನ ಮಾಡಿದ ಬಳಿಕ ಕೆಲವು ನಿರ್ದಿಷ್ಟ ನಿಬಂಧನೆಗಳೊಂದಿಗೆ ಪುರೋಹಿತ್’ರವರನ್ನು ಪುನಃ ಸೇರಿಸಿಕೊಳ್ಳಲಾಗುವುದು ಎಂದು ಸೇನೆ ಹೇಳಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.