
ನವದೆಹಲಿ(ಡಿ.12): ವಿವಾಹ ಸೇರಿದಂತೆ ಇತರ ಕಾರ್ಯಕ್ರಮಗಳಲ್ಲಿ ಆಹಾರ ಅಪವ್ಯಯವಾಗದಂತೆ ತಡೆಯುವ ನಿಟ್ಟಿನಲ್ಲಿ ಅತಿಥಿಗಳ ಸಂಖ್ಯೆಯನ್ನು ಮಿತಿಗೊಳಿಸುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ಗೆ ದೆಹಲಿ ಸರ್ಕಾರ ತಿಳಿಸಿದೆ.
ಮದುವೆಯಂಥ ಅದ್ಧೂರಿ ಕಾರ್ಯಕ್ರಮಗಳಲ್ಲಿ ಆಹಾರದ ಅಪವ್ಯಯ ಮತ್ತು ನೀರನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವ ಬಗ್ಗೆ ಕೋರ್ಟ್ ಡಿ.6ರಂದು ಕಳವಳ ವ್ಯಕ್ತಪಡಿಸಿತ್ತು. ಈ ಎಲ್ಲ ವಿಚಾರಗಳ ಬಗ್ಗೆ ಲೆಫ್ಟಿನೆಂಟ್ ಗವರ್ನರ್ ಹಾಗೂ ಸರ್ಕಾರದ ನಡುವಿನ ಸಭೆಯಲ್ಲಿ ಚರ್ಚಿಸಲಾಗಿದೆ. ಈ ವೇಳೆ ಕಾರ್ಯಕ್ರಮಗಳಿಗೆ ಆಗಮಿಸುವ ಅತಿಥಿಗಳ ಸಂಖ್ಯೆಯನ್ನು ಮಿತಿಗೊಳಿಸುವುದರಿಂದ ಉತ್ತಮ ಗುಣಮಟ್ಟದ ಆಹಾರ ನೀಡಬಹುದು.
ಅಲ್ಲದೆ, ಇದರಿಂದ ಕಾರ್ಯಕ್ರಮದ ಅತಿಥಿಗಳ ನಿಯಂತ್ರಣ ಮಾಡಬಹುದು. ಜೊತೆಗೆ, ಹಸಿದವರಿಗೆ ಕ್ಯಾಟರರ್‌ಗಳು ಮತ್ತು ಎನ್‌ಜಿಒಗಳ ಮೂಲಕ ಆಹಾರ ತಲುಪಿಸಬಹುದು ಎಂದು ಸುಪ್ರೀಂ ಪೀಠಕ್ಕೆ ದೆಹಲಿ ಮುಖ್ಯ ಕಾರ್ಯದರ್ಶಿ ವಿಜಯ್ ಕುಮಾರ್ ದೇವ್ ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.