
ಬೆಂಗಳೂರು (ಮೇ. 24): ಲಿಂಗಾಯತ-ವೀರಶೈವ ಪ್ರತ್ಯೇಕ ಧರ್ಮ ವಿಚಾರ ಹಾಗೂ ಲಿಂಗಾಯತರಿಗೆ ಅಲ್ಪಸಂಖ್ಯಾತ ಸ್ಥಾನಮಾನ ನೀಡುವ ವಿಚಾರಗಳ ಕುರಿತು ಕಾದು ನೋಡುವಂತೆ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಪ್ರಮಾವವಚನ ಸ್ವೀಕಾರ ಸಮಾರಂಭದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಲಿಂಗಾಯತ-ವೀರಶೈವ ಪ್ರತ್ಯೇಕ ಧರ್ಮ ವಿಚಾರಕ್ಕಿಂತಲೂ ಪ್ರಮುಖವಾದ ವಿಚಾರಗಳು ಬಹಳಷ್ಟಿವೆ ಎಂದು ಮಾರ್ಮಿಕವಾಗಿ ಹೇಳಿದರು.
ರಾಜ್ಯದ ಜನರ ಸಮಸ್ಯೆ ಬಗೆಹರಿಸುವುದು ತಮ್ಮ ಮೊದಲ ಆದ್ಯತೆಯಾಗಿದ್ದು, ಪ್ರತೇಕ ಧರ್ಮ ಹಾಗೂ ಅಲ್ಪಸಂಖ್ಯಾತ ಸ್ಥಾನಮಾನದ ವಿಚಾರ ಅಲ್ಲ ಎಂದು ಕುಮಾರಸ್ವಾಮಿ ಹೇಳಿದ್ದಾರೆ. ಆದರೆ ಈ ವಿಚಾರವಾಗಿ ಯಾರೇ ಆದರೂ ಹೋರಾಟಕ್ಕೆ ಇಳಿಯುವ ಅಗತ್ಯವಿಲ್ಲ ಎಂದಿರುವ ಸಿಎಂ, ಈ ಕುರಿತು ಎರಡೂ ಬಣಗಳ ಜೊತೆ ಚರ್ಚೆಗೆ ಸಿದ್ದವಿರುವುದಾಗಿ ಸಂದೇಶ ರವಾನಿಸಿದ್ದಾರೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ ಹಿಂದಿನ ಸರ್ಕಾರ ಕೈಗೊಂಡ ನಿರ್ಧಾರಗಳು ಮತ್ತು ಅವುಗಳ ಸಾಧಕ-ಬಾಧಕಗಳ ಕುರಿತು ಚರ್ಚೆ ನಡೆಸಿದ ಬಳಿಕವಷ್ಟೇ ಮುಂದುವರೆಯುವುದಾಗಿ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಆದರೆ ಪ್ರತಯೇಕ ಧರ್ಮ ಮತ್ತು ಅಲ್ಪಸಂಖ್ಯಾತ ಸ್ಥಾನದ ಕುರಿತು ತಮ್ಮ ಸರ್ಕಾರ ಆತುರದ ನಿರ್ಧಾರ ಕೈಗೊಳ್ಳು ಸಿದ್ದವಿಲ್ಲ ಎಂದೂ ಸಿಎಂ ಸ್ಪಷ್ಟಪಡಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.