ಮುಂಬೈನಲ್ಲೂ ಲಿಂಗಾಯತ ಪ್ರತ್ಯೇಕ ಧರ್ಮ ಹೋರಾಟ

By Suvarna Web DeskFirst Published Apr 9, 2018, 9:37 AM IST
Highlights

ಕರ್ನಾಟಕದಲ್ಲಿ ನಡೆಯುತ್ತಿದ್ದ ಲಿಂಗಾಯತ ಧರ್ಮ ಹೋರಾಟ ಇದೀಗ ಮಹಾರಾಷ್ಟ್ರಕ್ಕೂ ವ್ಯಾಪಿಸಿದೆ. ಪ್ರತ್ಯೇಕ ಧರ್ಮ ಘೋಷಿಸಬೇಕು ಹಾಗೂ ರಾಷ್ಟ್ರಮಟ್ಟದಲ್ಲಿ ಲಿಂಗಾಯತರಿಗೆ ಅಲ್ಪಸಂಖ್ಯಾತ ಸ್ಥಾನಮಾನ ನೀಡಬೇಕು ಎಂದು ಮಹಾರಾಷ್ಟ್ರದ ಔರಂಗಾಬಾದ್ ನಲ್ಲಿ ಭಾನುವಾರ ಲಿಂಗಾಯತ ಸಮುದಾಯ ಬೃಹತ್ ಪ್ರತಿಭಟನೆ ನಡೆಸಿತು.

ಮುಂಬೈ : ಕರ್ನಾಟಕದಲ್ಲಿ ನಡೆಯುತ್ತಿದ್ದ ಲಿಂಗಾಯತ ಧರ್ಮ ಹೋರಾಟ ಇದೀಗ ಮಹಾರಾಷ್ಟ್ರಕ್ಕೂ ವ್ಯಾಪಿಸಿದೆ. ಪ್ರತ್ಯೇಕ ಧರ್ಮ ಘೋಷಿಸಬೇಕು ಹಾಗೂ ರಾಷ್ಟ್ರಮಟ್ಟದಲ್ಲಿ ಲಿಂಗಾಯತರಿಗೆ ಅಲ್ಪಸಂಖ್ಯಾತ ಸ್ಥಾನಮಾನ ನೀಡಬೇಕು ಎಂದು ಮಹಾರಾಷ್ಟ್ರದ ಔರಂಗಾಬಾದ್ ನಲ್ಲಿ ಭಾನುವಾರ ಲಿಂಗಾಯತ ಸಮುದಾಯ ಬೃಹತ್ ಪ್ರತಿಭಟನೆ ನಡೆಸಿತು.

ಕರ್ನಾಟಕ ಗಡಿಗೆ ಹೊಂದಿಕೊಂಡಂತೆ ಇರುವ ಮಹಾರಾಷ್ಟ್ರದ ಭಾಗಗಳಲ್ಲಿ ಸಾಕಷ್ಟು ಲಿಂಗಾಯತ ಜನಸಂಖ್ಯೆ ಇದೆ. ಇವರು ಕೂಡ ಕರ್ನಾಟಕ ಸರ್ಕಾರವು ಪ್ರತ್ಯೇಕ ಲಿಂಗಾಯತ ಧರ್ಮ ಹಾಗೂ ಅಲ್ಪಸಂಖ್ಯಾತ ಸಮುದಾಯ ಸ್ಥಾನಮಾನಕ್ಕೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುತ್ತಿದ್ದಂತೆಯೇ ಮಹಾರಾಷ್ಟ್ರದಲ್ಲೂ ಬೀದಿಗಿಳಿದಿದ್ದಾರೆ.

ಈ ನಡುವೆ, ಭಾನುವಾರ ನಡೆದ ಲಿಂಗಾಯತ ರ್ಯಾಲಿಯಲ್ಲಿ ಮರಾಠಾ ಸಮುದಾಯದ ಮುಖಂಡರು ಕೂಡ ಪಾಲ್ಗೊಂಡು ಬೆಂಬಲ ಘೋಷಿಸಿದ್ದು ವಿಶೇಷವಾಗಿತ್ತು. ಶಿವಲಿಂಗ ಶಿವಾಚಾರ್ಯ ಸ್ವಾಮೀಜಿ ಹಾಗೂ ಮಾತೆ ಮಹಾದೇವಿ ಅವರ ಮಾರ್ಗದರ್ಶನದಲ್ಲಿ ನಡೆದ ಮೆರವಣಿಗೆಯಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಪಾಲ್ಗೊಂಡು ವಿವಿಧ ಘೋಷಣೆಗಳನ್ನು ಕೂಗಿದರು.

click me!