
ಬೀದರ್(ಜೂ.13): ಪ್ರತ್ಯೇಕ ಲಿಂಗಾಯತ ಧರ್ಮ ವಿಚಾರಕ್ಕೆ ಸಂಬಂಧಿಸಿದಂತೆ ಮತ್ತೊಂದು ಮಹತ್ವದ ಬೆಳವಣಿಗೆ ನಡೆದಿದ್ದು, ಪ್ರತ್ಯೇಕ ಲಿಂಗಾಯತ ಧರ್ಮಕ್ಕಾಗಿ ಆಗ್ರಹಿಸಿ 30ಕ್ಕೂ ಹೆಚ್ಚು ಮಠಾಧೀಶರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲಿದ್ದಾರೆ ಎಂದು ಹೇಳಲಾಗಿದೆ.
ಪ್ರತ್ಯೇಕ ಲಿಂಗಾಯತ ಧರ್ಮಕ್ಕಾಗಿ ಆಗ್ರಹಿಸಿ 30 ಕ್ಕೂ ಹೆಚ್ಚು ಮಠಾಧೀಶರು ಪ್ರಧಾನಿ ಅವರ ಬಳಿ ನಿಯೋಗ ಕೊಂಡೊಯ್ಯಲಿದ್ದು, ಲಿಂಗಾಯತ ಪ್ರತ್ಯೇಕ ಧರ್ಮದ ಅಗತ್ಯತೆಯನ್ನು ಮನವರಿಕೆ ಮಾಡಿಕೊಡಲಿದ್ದಾರೆ ಎನ್ನಲಾಗಿದೆ.
ಇದೇ ವೇಳೆ ಸಮ್ಮಿಶ್ರ ಸರ್ಕಾರದಲ್ಲಿ ಎಂ.ಬಿ. ಪಾಟೀಲ್ ಅವರಿಗೆ ಸಚಿವ ಸ್ಥಾನ ಕೈತಪ್ಪಿರುವುದಕ್ಕೆ ಲಿಂಗಾಯತ ಸಮನ್ವಯ ಸಮಿತಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಈ ಹಿಂದೆ ವಿರೇಂದ್ರ ಪಾಟೀಲರಿಗೆ ಅನ್ಯಾಯ ಮಾಡಿದಂತೆ ಎಂ.ಬಿ.ಪಾಟೀಲ್ ಅವರಿಗೂ ಕಾಂಗ್ರೆಸ್ ಅನ್ನಾಯ ಮಾಡುತ್ತಿದ್ದು, ಆದಷ್ಟು ಬೇಗ ತಪ್ಪನ್ನು ಸರಿಪಡಿಸಿಕೊಳ್ಳದಿದ್ದರೆ ಮುಂದಿನ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಬೇಕಾಗುತ್ತದೆ ಎಂದು ಎಚ್ಚರಿಸಿದೆ.
ಸಚಿವರಾಗಿ ಸಮರ್ಥ ಆಡಳಿತ ನೀಡಿದ್ದ ಎಂ.ಬಿ. ಪಾಟೀಲ್ ಅವರನ್ನು ಲಿಂಗಾಯತ ಹೋರಾಟದ ಕಾರಣಕ್ಕೆ ಮೂಲೆಗುಂಪು ಮಾಡಲಾಗುತ್ತಿದ್ದು, ಕಾಂಗ್ರೆಸ್ ಹೈಕಮಾಂಡ್ ಈ ತಪ್ಪನ್ನು ಸರಿಪಡಿಸಿಕೊಳ್ಳಬೇಕು ಎಂದು ಮಠಾಧೀಶರು ಆಗ್ರಹಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.