
ನಾಸಿಕ್ : ಕರ್ನಾಟಕದಂತೆ ಮಹಾರಾಷ್ಟ್ರದಲ್ಲೂ ಲಿಂಗಾಯತರಿಗೆ ಅಲ್ಪಸಂಖ್ಯಾತ ಸ್ಥಾನಮಾನ ಹಾಗೂ ಪ್ರತ್ಯೇಕ ಧರ್ಮ ಧರ್ಮ ಸ್ಥಾನಮಾನ ನೀಡಬೇಕು ಎಂದು ಆಗ್ರಹಿಸಿ ನಾಸಿಕ್‌ನಲ್ಲಿ ಭಾನುವಾರ ಪ್ರತಿಭಟನೆ ನಡೆಸಲಾಯಿತು.
ಲಿಂಗಾಯತ ಸಂಘರ್ಷ ಸಮಿತಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ನಾಸಿಕ್, ಧುಳೆ, ಜಳಗಾಂವ್, ಅಹಮದ್‌ನಗರ ಹಾಗೂ ನಂದೂರ್‌ಬಾರ್ ಜಿಲ್ಲೆಗಳ ಲಿಂಗಾಯತರು ಪಾಲ್ಗೊಂಡಿದ್ದರು. ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು.
‘ಮಹಾರಾಷ್ಟ್ರದ ಜನಸಂಖ್ಯೆಯಲ್ಲಿ ಲಿಂಗಾಯತರ ಪ್ರಮಾಣ ಶೇ.9ರಷ್ಟಿದೆ. ಕರ್ನಾಟಕದಂತೆ ಮಹಾರಾಷ್ಟ್ರದಲ್ಲೂ ಲಿಂಗಾಯತರಿಗೆ ಸವಲತ್ತು ಸಿಗಬೇಕು’ ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.