
ಬೆಂಗಳೂರು(ಜು.28): ಲಿಂಗಾಯತ ಪ್ರತ್ಯೇಕ ಧರ್ಮದ ಪ್ರಸ್ತಾವನೆ ರಾಜ್ಯ ಕಾಂಗ್ರೆಸ್'ಗೆ ತಿರುಗುಬಾಣವಾಗುವ ಆತಂಕ ಎದುರಾಗಿದೆ. ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿರುವ ಲಿಂಗಾಯತ ಪ್ರತ್ಯೇಕ ಧರ್ಮ ಪ್ರಸ್ತಾವನೆ ವಿಚಾರದಲ್ಲಿ ಸರ್ಕಾರ ವಿಶೇಷ ಆಸಕ್ತಿ ವಹಿಸುವುದು ಬೇಡ ಎಂದು ಕಾಂಗ್ರೆಸ್ ಹೈಕಮಾಂಡ್ ಖಡಕ್ ಎಚ್ಚರಿಕೆ ನೀಡಿದೆ.
ಪ್ರತ್ಯೇಕ ಲಿಂಗಾಯತ ಧರ್ಮದ ಬೇಡಿಕೆ ವಿಚಾರದಲ್ಲಿ ಮುಂದುವರಿದರೆ ರಾಷ್ಟ್ರೀಯ ಮಟ್ಟದಲ್ಲಿ ಬೇರೆ ಬೇರೆ ಪಂಥಗಳಿಂದ ಇದೇ ಬೇಡಿಕೆ ಬರುವುದರಿಂದ ಪಕ್ಷಕ್ಕೆ ತಲೆನೋವಾಗಬಹುದು. ಕಾಂಗ್ರೆಸ್'ನ ವೋಟ್ ಬ್ಯಾಂಕ್ ಆಗಿರುವ ಮುಸ್ಲಿಂ ಸಮುದಾಯಕ್ಕೂ ಬೇರೆಯದೇ ಸಂದೇಶ ರವಾನೆಯಾಗುವ ಆತಂಕ ಎದುರಾಗಲಿದೆ ಎಂಬ ಎಚ್ಚರಿಕೆ ರಾಜ್ಯ ನಾಯಕರಿಗೆ ತಲುಪಿದೆ.
ವೀರಶೈವ, ಲಿಂಗಾಯತ ಪ್ರತ್ಯೇಕ ಧರ್ಮವಾಗಿ ವಿಶೇಷ ಮೀಸಲಾತಿ ದೊರೆತರೆ ನಿಜವಾದ ಅಲ್ಪಸಂಖ್ಯಾತರಿಗೆ ಮೀಸಲು ಅವಕಾಶ ಕೈತಪ್ಪಲಿದೆ ಎಂಬ ಆತಂಕವನ್ನೂ ಹೈಕಮಾಂಡ್ ವ್ಯಕ್ತಪಡಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.