
ಬೆಂಗಳೂರು: ರಾಜ್ಯ ಸರ್ಕಾರ ರೈತ ಸಾಲ ಮಾಡಿದ ಬೆನ್ನಲ್ಲೇ ಆಡಳಿತ ಪಕ್ಷ ಮತ್ತು ಪ್ರತಿಪಕ್ಷಗಳ ಮುಖಂಡರ ನಡುವೆ ಪರಸ್ಪರ ವಾಕ್ಸಮರ ಮುಂದುವರಿದೆ.
ಕೇಂದ್ರ ಸರ್ಕಾರದಿಂದ ರೈತರ ಸಾಲ ಮನ್ನಾ ಮಾಡಿಸದ ಬಿಜೆಪಿಗೆ ರೈತರ ಬಗ್ಗೆ ಮಾತನಾಡಲು ನೈತಿಕ ಹಕ್ಕಿಲ್ಲ ಎಂದು ಮಾಜಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬೆಂಗಳೂರಿನಲ್ಲಿ ಟೀಕಿಸಿದ್ದಾರೆ.
ಅದರಲ್ಲೂ ತಮ್ಮ ಹೋರಾಟಕ್ಕೆ ಮಣಿದು ಸರ್ಕಾರ ಸಾಲ ಮನ್ನಾ ಮಾಡಿದೆ ಎಂದು ಬಿಜೆಪಿ ನಾಯಕರು ಹೇಳಿಕೊಳ್ಳುತ್ತಿದ್ದು ಅವರಿಗೆ ನಾಚಿಕೆಯಾಗಬೇಕು. ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರು ಎಲ್ಲಿಯೂ ರೈತರ ಬಗ್ಗೆಯಾಗಲಿ, ಸಾಲ ಮನ್ನಾ ಬಗ್ಗೆಯಾಗಲಿ ಮಾತನಾಡಬಾರದು ಎಂದು ಕುಮಾರಸ್ವಾಮಿ ಹೇಳಿದ್ದಾರೆ. ರಾಜ್ಯ ಸರ್ಕಾರ ಮಾಡಿರುವ ಸಾಲ ಮನ್ನಾ ಮೊತ್ತ ರೈತರಿಗೆ ಏನೇನೂ ಸಾಲದು. ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿರುವ ರೈತರ ಸಾಲವನ್ನೂ ಮನ್ನಾ ಮಾಡುವ ಹೊಣೆಯನ್ನು ರಾಜ್ಯ ಸರ್ಕಾರವೇ ಹೊತ್ತುಕೊಳ್ಳಬೇಕು ಎಂದಿದ್ದಾರೆ.
ಬಿಎಸ್‌ವೈ ಪ್ರತಿದಾಳಿ: ಕುಮಾರಸ್ವಾಮಿ ಟೀಕೆಗೆ ಪ್ರತಿದಾಳಿ ನಡೆದಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ‘ನೀವು ನನ್ನ ವಿರುದ್ಧ ಹಗುರವಾಗಿ ಮಾತನಾಡುವುದನ್ನು ನಿಲ್ಲಿಸದಿದ್ದರೆ ನಿಮ್ಮ ಬಗ್ಗೆ ನನ್ನಲ್ಲಿರುವ ದಾಖಲೆಗಳನ್ನು ಬಹಿರಂಗ ಮಾಡಬೇಕಾಗುತ್ತದೆ' ಎಂದು ಎಚ್ಚರಿಸಿದ್ದಾರೆ. ಎಂದು ಹೇಳಿದ್ದಾರೆ. ರೈತರ ಸಾಲ ಮನ್ನಾ ಕಾಂಗ್ರೆಸ್ ಸರ್ಕಾರದ ಚುನಾವಣಾ ಗಿಮಿಕ್ ಎಂದು ವಿಧಾನಪರಿಷತ್ತು ವಿರೋಧ ಪಕ್ಷದ ನಾಯಕ ಕೆ.ಎಸ್. ಈಶ್ವರಪ್ಪ ಟೀಕಿಸಿದ್ದಾರೆ.
ಚುನಾವಣೆಗೆ ಇನ್ನೂ ಸಾಕಷ್ಟುಸಮಯ ಇರುವಾಗ ಸಿದ್ದರಾಮಯ್ಯ ಸಾಲ ಮನ್ನಾ ಮಾಡಿರುವುದನ್ನು ಚುನಾವಣಾ ಗಿಮಿಕ್ ಎನ್ನುವುದಾದರೆ, ಯಡಿಯೂರಪ್ಪ ಅವರು ಸಿಎಂ ಆಗಿದ್ದಾಗ ಚುನಾವಣೆಗೆ ಕೇವಲ 1 ತಿಂಗಳಿರುವಾಗ 3,600 ಕೋಟಿ ರು. ಸಾಲ ಮನ್ನಾ ಮಾಡಿದ್ದರಲ್ಲಾ, ಅದನ್ನು ಏನು ಎನ್ನಬೇಕು ಎಂದು ಕೃಷಿ ಸಚಿವ ಕೃಷ್ಣಭೈರೇಗೌಡ ಪ್ರಶ್ನಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.