
ಬೆಂಗಳೂರು (ಜ.05): ಡಾ. ವಿಷ್ಣುವರ್ಧನ್ ಓದಿದ ಚಾಮರಾಜಪೇಟೆಯ ಮಾಡೆಲ್ ಹೈಯರ್ ಕನ್ನಡ ಶಾಲೆಯನ್ನು ಮುಚ್ಚಲು ಸ್ಥಳೀಯ ಆಡಳಿತ ನಿರ್ಧರಿಸಿದೆ. ಈ ಶಾಲೆಗೆ 60 ಕ್ಕೂ ಹೆಚ್ಚು ವರ್ಷಗಳ ತಿಹಾಸವಿದೆ. ಕಳೆದ 25 ವರ್ಷಗಳ ಹಿಂದೆಯೇ ಆಂಗ್ಲ ಮಾಧ್ಯಮವಾಗಿ ಬದಲಾಯಿಸಿದರೆ ಶಾಲೆ ಅಭಿವೃದ್ಧಿಯಾಗುತ್ತದೆ ಎಂದು ಅನೇಕರು ಸಲಹೆ ನೀಡಿದ್ದರೂ ಕನ್ನಡದ ಮೇಲಿನ ಪ್ರೇಮದಿಂದಾಗಿ ಶಾಲಾ ಆಡಳಿತ ಮಂಡಳಿ ಇದಕ್ಕೆ ಒಪ್ಪಿರಲಿಲ್ಲ.
ಬರೀ ಅವ್ಯವಸ್ಥೆಗಳ ಆಗರವಾಗಿರುವ ಈ ಶಾಲೆಯನ್ನು ಮುಚ್ಚಲು ಸ್ಥಳೀಯ ಆಡಳಿತ ನಿರ್ಧರಿಸಿದೆ. ಇದನ್ನು ವಿರೋಧಿಸಿ ವಿಷ್ಣು ಅಭಿಮಾನಿಗಳು, ಸಾಹಿತಿಗಳು, ಕಲಾವಿದರು ಉಪ್ಪಾರ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.