
ಶಿವಮೊಗ್ಗ(ಸೆ.03): ಮಹಾನಗರಪಾಲಿಕೆಯಾದ ನಂತರದ ಮೊದಲ ಚುನಾವಣೆಯಲ್ಲಿ ಬಿಜೆಪಿಗೆ ಗೆಲುವಾಗಿದೆ. ಈ ಮೂಲಕ ಶಿವಮೊಗ್ಗ ಬಿಜೆಪಿಯ ಭದ್ರಕೋಟೆಯಾಗಿ ಮಾರ್ಪಟ್ಟಿದೆ.
ಈ ಹಿಂದಿನ ಚುನಾವಣೆಯಲ್ಲಿ ಬಿಜೆಪಿ ಒಳಜಗಳ, ನಾಯಕರ ನಡುವಿನ ಬಿಕ್ಕಟ್ಟು ಜೆಡಿಎಸ್ ಹಾಗೂ ಕಾಂಗ್ರೆಸ್‌ಗೆ ವರವಾಗಿ ಪರಿಣಿಮಿಸಿತ್ತು. ಆದರೆ ಈ ಬಾರಿ ಬಿಜೆಪಿ ಒಗ್ಗಟ್ಟಿನ ಮಂತ್ರ ಜಪಿಸಿತ್ತು. ಬಿಜೆಪಿಯ ಈಶ್ವರಪ್ಪ ಮತ್ತು ರುದ್ರೇಗೌಡರ ಒಗ್ಗಟ್ಟಿನ ತಂತ್ರಗಾರಿಕೆ ಫಲಿಸಿದೆ ಶಿವಮೊಗ್ಗ ಪಾಲಿಕೆಯಲ್ಲಿ ಜೆಡಿಎಸ್ಗೆ ಭಾರೀ ನಷ್ಟವಾಗಿದೆ.
ಕಳೆದ ಅವಧಿಯಲ್ಲಿ 5 ಸ್ಥಾನವಿದ್ದ ಜೆಡಿಎಸ್ ಈ ಬಾರಿ ಕೇವಲ 1 ಸ್ಥಾನದಲ್ಲಿ ಗೆದ್ದಿದೆ. ಕಾಂಗ್ರೆಸ್ ನಾಯಕತ್ವಕ್ಕೆ ಶಿವಮೊಗ್ಗ ನಗರದ ಜನತೆ ತೀವ್ರ ಹೊಡೆತ ಕೊಟ್ಟಿದ್ದಾರೆ.
ಶಿವಮೊಗ್ಗ ಮಹಾನಗರಿ ಪಾಲಿಕೆ
ಒಟ್ಟು ವಾರ್ಡ್: 35
ಬಿಜೆಪಿ-25
ಕಾಂಗ್ರೆಸ್-7
ಜೆಡಿಎಸ್ -02
ಪಕ್ಷೇತರರು-06
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.