
ಹಾಸನ(ಸೆ.03): ಕರ್ನಾಟಕ ಸ್ಥಳೀಯ ಸಂಸ್ಥೆ ಚುನಾವಣೆ ಫಲಿತಾಂಶ ಹೊರಬೀಳುತ್ತಿದ್ದಂತೆ ಅಧಿಕಾರ ಗದ್ದುಗೆ ಹಿಡಿಯಲು ಪೈಪೋಟಿ ಜೋರಾಗಿದೆ. ಅತಂತ್ರ ಫಲಿತಾಂಶ ಹೊರಬಿದ್ದ ಜಿಲ್ಲೆಗಳಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಮೈತ್ರಿಗೆ ಮುಂದಾಗಿದೆ. ಈ ಕುರಿತು ರಾಷ್ಟ್ರೀಯ ಅಧ್ಯಕ್ಷ ಹೆಚ್ ಡಿ ದೇವೇಗೌಡ ಸೂಚನೆ ನೀಡಿದ್ದಾರೆ.
ಸ್ಥಳೀಯ ಸಂಸ್ಥೆ ಚುನಾವಣೆ ಫಲಿತಾಂಶ ಹೊರಬಿದ್ದ ಬಳಿಕ ಹಾಸನದಲ್ಲಿ ಮಾತನಾಡಿದ ಹೆಚ್ ಡಿ ದೇವೇಗೌಡ, ಬಿಜೆಪಿ ದೂರ ಇಡಲು ಸಾಧ್ಯವಿರೋ ಎಲ್ಲಾ ಕಡೆ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಳ್ಳಲಿದೆ ಎಂದಿದ್ದಾರೆ. ಬೇರೆ ಕಡೆಗಳಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಸಮ್ಮಿಶ್ರವಾಗಿ ಅಧಿಕಾರ ರಚಿಸಲಿದೆ. ಈ ಮೂಲಕ ಬಿಜೆಪಿ ಹೊರಗಿಡಲಿದ್ದೇವೆ. ಆದರೆ ಸದ್ಯ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ವಿದೇಶ ಪ್ರವಾಸದಲ್ಲಿದ್ದಾರೆ. ಇನ್ನು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡುರಾವ್ ಜೊತೆ ಇನ್ನು ಮಾತುಕತೆ ನಡೆಸಿಲ್ಲ ಎಂದು ದೇವೇಗೌಡ ಹೇಳಿದ್ದಾರೆ.
ಅತಂತ್ರ ಫಲಿತಾಂಶ ಹೊರಬಿದ್ದ ಜಿಲ್ಲೆಗಳಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಳ್ಳುತ್ತೇವೆ. ಇದು ನನ್ನ ಅಭಿಪ್ರಾಯ ಎಂದು ದೇವೇಗೌಡ ಹೇಳಿದ್ದಾರೆ. ಸ್ಥಳೀಯ ಸಂಸ್ಥೆ ಚುನಾವಣೆ ಹಾಗೂ ಲೋಕಸಭಾ ಚುನಾವಣೆ ಎರಡೂ ಬೇರೆ ಬೆೇರೆ. ಈ ಫಲಿತಾಂಶ ಮುಂದಿನ ಲೋಕಸಭಾ ಚುನಾವಣೆಗೆ ದಿಕ್ಸೂಚಿಯಾಗಲ್ಲ ಎಂದಿದ್ದಾರೆ. ಇದೇ ವೇಳೆ ಬೆಳಗಾವಿಯಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ಜಾರಕಿಹೊಳಿ ಕುಟುಂಬದಲ್ಲಿ ಕಲಹ ಏರ್ಪಟ್ಟಿರುವ ಕುರಿತು ನಾನು ಯಾವುದೇ ಪ್ರತಿಕ್ರಿಯೆ ನೀಡಲ್ಲ. ಎಂದಿದ್ದಾರೆ.
ಸಂಪುಟ ವಿಸ್ತರಣೆ ಕುರಿತು ಮಾತನಾಡಿದ ದೇವೇಗೌಡ, ಸಿದ್ದರಾಮಯ್ಯ ಜೊತೆ ಚರ್ಚಿಸಲಿದ್ದೇನೆ ಎಂದಿದ್ದಾರೆ. ಈ ಹಿಂದೆ ಮೂರನೇ ಶ್ರಾವಣದ ಬಳಿಕ ಸಂಪುಟ ವಿಸ್ತರಣೆ ಎಂದು ಸಿದ್ದರಾಮಯ್ಯ ಹೇಳಿದ್ದರು. ಈ ಕುರಿತು ಅಂತಿನ ನಿರ್ಧಾರ ಕೈಗೊಂಡಿಲ್ಲ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.