ಕಾಂಗ್ರೆಸ್ - ಜೆಡಿಎಸ್ ಮೈತ್ರಿ ಇಲ್ಲ

By Web DeskFirst Published Aug 6, 2018, 7:33 AM IST
Highlights

ಈಗಾಗಲೇ ಕರ್ನಾಟಕದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಮೈತ್ರಿ ಸರ್ಕಾರವನ್ನು ರಚನೆ ಮಾಡಿಕೊಂಡು ಆಡಳಿತ ನಡೆಸುತ್ತಿದ್ದು ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಮೈತ್ರಿ ಮಾಡಿಕೊಳ್ಳಲ್ಲ ಎಂದು ಎಚ್ ಡಿ ದೇವೇಗೌಡ ಹೇಳಿದ್ದಾರೆ. 

ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸಿ ತನ್ನ ಬಲ ಪ್ರದರ್ಶನ ಮಾಡಲು ಜೆಡಿಎಸ್ ಸಜ್ಜಾಗಿದ್ದು, ಚುನಾವಣೆ ಘೋಷಣೆ ಬೆನ್ನಲ್ಲೇ ಅಧಿಕಸ್ಥಾನ ಗೆಲ್ಲುವ ನಿಟ್ಟಿನಲ್ಲಿ ರಾಜಕೀಯ ತಂತ್ರ ರೂಪಿಸಲು ಸಿದ್ಧತೆ ನಡೆಸಿದೆ.

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕಾಂಗ್ರೆಸ್‌ನೊಂದಿಗೆ ಮೈತ್ರಿ ಮಾಡಿ ಕೊಳ್ಳದೆ ಏಕಾಂಗಿಯಾಗಿ ಸ್ಪರ್ಧಿಸಲು ತೀರ್ಮಾನಿಸಲಾಗಿದೆ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಸ್ಪಷ್ಟವಾಗಿ ತಿಳಿಸಿದ್ದಾರೆ. ಭಾನುವಾರ ಪಕ್ಷದ ಕಚೇರಿ ಜೆ.ಪಿ.ಭವನದಲ್ಲಿ ನಡೆದ ಜೆಡಿಎಸ್‌ನ ಮುಖಂಡರ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರದ ಮಟ್ಟದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಮಾಡಿ ಕೊಂಡಿದೆ. ಅದನ್ನು ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಕೊಂಡೊಯ್ಯುವುದಿಲ್ಲ. ಸಮ್ಮಿಶ್ರ ಸರ್ಕಾರಕ್ಕೆ ಯಾವುದೇ ಅಪಾಯವಾಗದಂತೆ ಚುನಾವಣೆ ಎದುರಿಸಲಾಗುವುದು ಎಂದು ಅವರು ಹೇಳಿದರು.

ಚುನಾವಣೆಗೆ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಸಂಬಂಧ ಶೀಘ್ರದಲ್ಲಿಯೇ ಕಾರ್ಯೋನ್ಮುಖ ಆಗುತ್ತೇವೆ. ಸ್ಥಳೀಯ ನಾಯಕರೊಂದಿಗೆ ಚರ್ಚಿಸಿ ಅಭ್ಯರ್ಥಿಗಳನ್ನು ಅಂತಿಮ ಗೊಳಿಸುತ್ತೇವೆ. ಕಾಂಗ್ರೆಸ್-ಜೆಡಿಎಸ್ ಪಕ್ಷದ ನಾಯಕರು ಯಾವುದೇ ತಿಕ್ಕಾಟ ನಡೆಸದೆ ಸ್ಪರ್ಧಿಸುವುದು ಒಳ್ಳೆಯದು. ಸ್ಥಳೀಯ ಸಂಸ್ಥೆಗಳಿಗೆ ಎರಡು ಪಕ್ಷದ ನಾಯಕರು ಸೌಹಾರ್ದಯುತವಾಗಿ ಸ್ಪರ್ಧಿಸಬೇಕಾಗಿದೆ. ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರೊಂದಿಗೆ ಮಾತುಕತೆ ನಡೆಸಲಾಗಿದ್ದು, ಹೊಂದಾಣಿಕೆ ಇಲ್ಲದೆ ಕಣಕ್ಕಿಳಿಯುವ ಕುರಿತು ಚರ್ಚಿಸಲಾಗಿದೆ ಎಂದರು.

11 ರಿಂದ 4  ದಿನ ರಾಜ್ಯ ಪ್ರವಾಸ: ಇದೇ ತಿಂಗಳ 11 ರಿಂದ ನಾಲ್ಕು ದಿನಗಳ ರಾಜ್ಯ ಪ್ರವಾಸ ಕೈಗೊಂಡು ನಿಷ್ಕ್ರಿಯಗೊಂಡಿರುವ ಘಟಕಗಳನ್ನು ಬಲಗೊಳಿಸಲಾಗುವುದು. ಅವಶ್ಯ ಕತೆ ಬಿದ್ದಲ್ಲಿ ಬದಲಾವಣೆ ಮಾಡಲಾಗುವುದು ಎಂದು ಇದೇ ವೇಳೆ ದೇವೇಗೌಡರು ತಿಳಿಸಿದರು. ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆಯನ್ನು ಆ. 17ರಿಂದ ಪ್ರಾರಂಭಿಸು ತ್ತೇವೆ. ಸ್ಥಳೀಯ ನಾಯಕರೊಂದಿಗೆ ಮಾತುಕತೆ ನಡೆಸಿ ಮುಂದಿನ ನಿರ್ಧಾರ ಕೈಗೊಳ್ಳ ಲಾಗುವುದು ಎಂದು ಹೇಳಿದರು. 

ಪಕ್ಷದ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆಯನ್ನು ಸೆಪ್ಟೆಂಬರ್ ಕೊನೆಯ ವಾರ ಅಥವಾ ಅಕ್ಟೋಬರ್ ಮೊದಲ ವಾರದಲ್ಲಿ ನಡೆಸಲು   ತೀರ್ಮಾನಿಸ ಲಾಗಿದ್ದು, ಬೆಂಗಳೂರಿನಲ್ಲಿಯೇ ಸಭೆಯನ್ನು ನಡೆಸುವ ಬಗ್ಗೆ ಉದ್ದೇಶ ಹೊಂದಲಾಗಿದೆ. ಜೆಡಿಎಸ್ ಆಡಳಿತಾವಧಿಯಲ್ಲಿನ ಸಾಧನೆಗಳನ್ನು ಮತ್ತು ಸಮ್ಮಿಶ್ರ ಸರ್ಕಾರದ ಅಭಿವೃದ್ಧಿ ಕಾರ್ಯಗಳನ್ನು ಜನರ ಮುಂದಿಡಲು ಕಾರ್ಯಕರ್ತರು ಶ್ರಮಿಸಬೇಕು. ಅಲ್ಲದೇ, ಪಕ್ಷದ ಸಾಧನೆ ಕುರಿತು ಕಿರುಹೊತ್ತಿಗೆಯನ್ನು ಬಿಡುಗಡೆ ಮಾಡಿ ಜನತೆಗೆ ತಲುಪಿಸಲಾಗುವುದು ಎಂದು ಹೇಳಿದರು.

click me!