
ಲಖನೌ[ಜೂ.13]: ಹಳಿತಪ್ಪಿದ್ದ ಸರಕು ಸಾಗಣೆ ರೈಲೊಂದರ ಬಗ್ಗೆ ವರದಿ ಮಾಡಲು ತೆರಳಿದ್ದ ಟೀವಿ ವಾಹಿನಿಯೊಂದರ ಪತ್ರಕರ್ತನ ಮೇಲೆ ರೈಲ್ವೆ ಪೊಲೀಸರು ಹಲ್ಲೆ ನಡೆಸಿದ ಘಟನೆ ಉತ್ತರ ಪ್ರದೇಶದ ಶಾಮ್ಲಿ ನಗರದಲ್ಲಿ ನಡೆದಿದೆ.
ಈ ನಡುವೆ ಪೊಲೀಸರು ನನ್ನನ್ನು ವಿವಸ್ತ್ರನನ್ನಾಗಿ ಮಾಡಿ ಬಾಯಿಗೆ ಮೂತ್ರ ಮಾಡಿದ್ದಾರೆ ಎಂದು ಹಲ್ಲೆಗೊಳಗಾದ ಪತ್ರಕರ್ತ ಅಮಿತ್ ಶರ್ಮಾ ಆರೋಪಿಸಿದ್ದಾರೆ. ಆದರೆ ಈ ಆರೋಪವನ್ನು ಪೊಲೀಸರು ನಿರಾಕರಿಸಿದ್ದಾರೆ. ಪ್ರಕರಣ ಸಂಬಂಧ ಇಬ್ಬರು ಪೊಲೀಸರನ್ನು ಅಮಾನತು ಮಾಡಲಾಗಿದೆ. ರೈಲ್ವೆ ಅಧಿಕಾರಿಗಳ ಹಗರಣವೊಂದನ್ನು ಕೆಲ ದಿನಗಳ ಹಿಂದೆ ಅಮಿತ್ ಬಯಲಿಗೆಳೆದಿದ್ದರು ಎನ್ನಲಾಗಿದೆ.
ಈ ಹಿನ್ನೆಲೆಯಲ್ಲಿ ಮುಫ್ತಿಯಲ್ಲಿದ್ದ ರೈಲ್ವೆ ಪೊಲೀಸರಿಬ್ಬರು, ಮಂಗಳವಾರ ರಾತ್ರಿ ವರದಿಗೆಂದು ತೆರಳಿದ್ದ ಅಮಿತ್ ಮೇಲೆ ವಿನಾಕಾರಣ ಹಲ್ಲೆ ನಡೆಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.