
ನವದೆಹಲಿ: ದೇಶದಲ್ಲಿ ಲೋಕಸಭಾ ಮತ್ತು ರಾಜ್ಯಗಳ ವಿಧಾನಸಭೆ ಚುನಾವಣೆಗಳನ್ನು ಏಕಕಾಲಕ್ಕೆ ನಡೆಸಬೇಕು ಎಂಬ ಸಾಧ್ಯ-ಸಾಧ್ಯತೆಯ ಕುರಿತು ಚರ್ಚಿಸಲು ಕಾನೂನು ಆಯೋಗ ಕರೆದ ಸಭೆಗೆ ಕಾಂಗ್ರೆಸ್ ಮತ್ತು ಬಿಜೆಪಿ ಗೈರಾಗಿದ್ದವು.
ಇನ್ನು, ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳನ್ನು ಒಟ್ಟಿಗೆ ನಡೆಸುವುದರಿಂದ ರಾಷ್ಟ್ರೀಯ ಹಿತಾಸಕ್ತಿಗಳು ಮುನ್ನೆಲೆಗೆ ಬರಲಿದ್ದು, ರಾಷ್ಟ್ರೀಯ ಪಕ್ಷಗಳಿಗೆ ಅನುಕೂಲವಾಗುತ್ತದೆ.
ಇಂಥ ಕ್ರಮದಿಂದ ಸ್ಥಳೀಯ ವಿಚಾರಗಳು ಗೌಣವಾಗುತ್ತವೆ ಎಂಬುದಾಗಿ ಸಭೆಯಲ್ಲಿ ಭಾಗವಹಿಸಿದ್ದ ಪ್ರಾದೇಶಿಕ ಪಕ್ಷಗಳು ಸಭೆಯಲ್ಲಿ ಆತಂಕ ವ್ಯಕ್ತಪಡಿಸಿವೆ. ಈ ಪ್ರಸ್ತಾವವನ್ನು ತೃಣಮೂಲ ಕಾಂಗ್ರೆಸ್, ಸಿಪಿಐ ಪಕ್ಷಗಳು ವಿರೋಧಿಸಿದವು.
ಇನ್ನು ಒಟ್ಟಿಗೆ ಚುನಾವಣೆ ನಡೆಸುವುದಾದರೆ ಅದು 2024ಕ್ಕೆ ನಡೆಸಬೇಕು. ಅದಕ್ಕೂ ಮುನ್ನ ನಡೆಸಲೇಬಾರದು ಎಂದು ಎಐಎಡಿಎಂಕೆ ತನ್ನ ಅಭಿಪ್ರಾಯ ತಿಳಿಸಿತು. ಎನ್‌ಡಿಎ ಮಿತ್ರಪಕ್ಷ ಶಿರೋಮಣಿ ಅಕಾಲಿದಳ ಆಯೋಗದ ಪ್ರಸ್ತಾವವನ್ನು ಬೆಂಬಲಿಸಿತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.