ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಬೀದರ್ ಟಿಕೆಟ್ ಆಕಾಂಕ್ಷಿ

Published : Mar 09, 2019, 11:34 AM ISTUpdated : Mar 09, 2019, 12:00 PM IST
ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಬೀದರ್ ಟಿಕೆಟ್ ಆಕಾಂಕ್ಷಿ

ಸಾರಾಂಶ

ದೇಶದಲ್ಲಿ ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದು, ಇದೇ ವೇಳೆ ವಿವಿಧ ಪಕ್ಷಗಳಿಂದ ಟಿಕೆಟ್ ಆಕಾಂಕ್ಷಿಗಳ ಸಂಖ್ಯೆಯೂ ಹೆಚ್ಚುತ್ತಿದೆ. ಇದೇ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಬೀದರ್ ನಿಂದ ಟಿಕೆಟ್ ನೀಡಿದಲ್ಲಿ ಸ್ಪರ್ಧೆ ಮಾಡುವುದಾಗಿ ಹೇಳಿದ್ದಾರೆ. 

ಹುಬ್ಬಳ್ಳಿ: ಜನತೆ ಅಪೇಕ್ಷೆ ಪಟ್ಟರೆ, ಹೈಕಮಾಂಡ್‌ ತೀರ್ಮಾನ ಕೈಗೊಂಡರೆ ಬೀದರ್‌ ಕ್ಷೇತ್ರದಿಂದ ಸ್ಪರ್ಧಿಸಲು ನಾನು ಸಿದ್ಧ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್‌ ಖಂಡ್ರೆ ತಿಳಿಸಿದರು.

ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಒಂದೊಮ್ಮೆ ಹೈಕಮಾಂಡ್‌ ಟಿಕೆಟ್‌ ನೀಡಿದರೆ ಬೀದರ್‌ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯುವುದಾಗಿ ಹೇಳಿದರು.

ಮಾ.11ರಂದು ಅಭ್ಯರ್ಥಿಗಳ ಆಯ್ಕೆಗೆ ಸ್ಕ್ರೀನಿಂಗ್‌ ಕಮಿಟಿ ಸಭೆ ಇದೆ. ಅದರಲ್ಲಿ ಅಭ್ಯರ್ಥಿಗಳ ಪಟ್ಟಿ ಅಂತಿಮವಾಗಲಿದೆ. ಧಾರವಾಡ ಮತ್ತು ಹಾವೇರಿ ಅಲ್ಪಸಂಖ್ಯಾತರಿಗೆ ಟಿಕೆಟ್‌ ನೀಡುವ ವಿಷಯವಾಗಿ ಈಗಾಗಲೇ ಎಲ್ಲ ಕ್ಷೇತ್ರಗಳ ಆಕಾಂಕ್ಷಿಗಳ ಪಟ್ಟಿನಮ್ಮ ಬಳಿ ಇದೆ. 

ಸ್ಕ್ರೀನಿಂಗ್‌ ಕಮಿಟಿ ಮೀಟಿಂಗ್‌ನಲ್ಲಿ ಚರ್ಚೆಯಾಗಲಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಗೆಲ್ಲುವ ಕುದುರೆಗೆ ನಾವು ಟಿಕೆಟ್‌ ನೀಡುತ್ತೇವೆ ಎಂದು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮುದ್ದಿನ ಶ್ವಾನಗಳಿಗಾಗಿ ಅನಿಮೇಟೆಡ್ ಸಿನಿಮಾ ಶೋ ಆಯೋಜಿಸಿದ ಥಿಯೇಟರ್: ರೆಡ್ ಕಾರ್ಪೆಟ್ ಹಾಸಿ ಸ್ವಾಗತ
ಇಂಡಿಗೋ ವಿಮಾನ ರದ್ದಾಗಿ ಪರದಾಡುತ್ತಿರುವ ಪ್ರಯಾಣಿಕರ ನೆರವಿಗೆ ಧಾವಿಸಿದ ಭಾರತೀಯ ರೈಲ್ವೆ