
ಶಿರಸಿ: ಸಚಿವ ಸಂಪುಟ ಪುನಾರಚನೆ ಸಂದರ್ಭದಲ್ಲಿ ಬದಲಾವಣೆ ಆದರೂ ತೊಂದರೆ ಇಲ್ಲ. ಬಹಳ ಇನ್ನಿಂಗ್ಸ್ ಆಡಿದ್ದೇನೆ. ಇನ್ನೂ ಆಡಬೇಕೆಂಬ ಆಸಕ್ತಿ ಇಲ್ಲ ಎಂದು ಕಂದಾಯ ಸಚಿವ ಆರ್.ವಿ. ದೇಶಪಾಂಡೆ ಮಾರ್ಮಿಕವಾಗಿ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಹೈಕಮಾಂಡ್ ನಿರ್ಧಾರದಂತೆ ಎಲ್ಲವೂ ನಡೆಯಲಿದೆ ಎಂದರು. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಹೊಂದಾಣಿಕೆಯನ್ನು ಹೈಕಮಾಂಡ್ ಅಂತಿಮಗೊಳಿಸಲಿದೆ. ಉಪ ಚುನಾವಣೆಯಲ್ಲಿ ಉಭಯ ಪಕ್ಷಗಳೂ ಅಭ್ಯರ್ಥಿ ಗೆಲುವಿಗೆ ಶ್ರಮಿಸುತ್ತಿವೆ ಎಂದು ಹೇಳಿದರು.
ಎಲ್ಲಿ ಕಾಂಗ್ರೆಸ್ ಪ್ರಾಬಲ್ಯ ಇದೆಯೋ ಅಲ್ಲಿ ಕಾಂಗ್ರೆಸ್‌ಗೆ ಟಿಕೆಟ್ ಸಿಗಲಿದೆ. ಕಾಂಗ್ರೆಸ್ ಹಾಗೂ ಜೆಡಿಎಸ್ ಒಳಗೆ ವಿವಾದ, ಗೊಂದಲ ಇಲ್ಲ. ಸಚಿವ ಸಂಪುಟ ಸಭೆಯಲ್ಲಿ ಅಭಿಪ್ರಾಯ ಇಡಬಹುದು. ಆದರೆ, ಅಲ್ಲಿ ಒಮ್ಮತದ ಮೇಲೆ ಪಡೆಯುವ ತೀರ್ಮಾನಕ್ಕೆ ಬದ್ಧವಾಗಿರಬೇಕು. ಡಿ.ಕೆ.ಶಿವಕುಮಾರ್ ಅವರು ಕೂಡ ಲಿಂಗಾಯತರಿಗೆ ಸಂಬಂಧಿಸಿದ ವಿಷಯ ಪ್ರಸ್ತಾಪಿಸಿದ್ದಾರೆ. ಅದು ಇತ್ಯರ್ಥ ಆಗಬೇಕಾದ ಸಂಗತಿ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.