
ಹೈದ್ರಾಬಾದ್ : ತೆಲಂಗಾಣದಲ್ಲಿ ಚುನಾವಣೆ ನಡೆಯುತ್ತಿದ್ದು, ಇದೇ ವೇಳೆ ತೆಲಂಗಾಣ ರಾಷ್ಟ್ರ ಸಮಿತಿ ಪಕ್ಷಕ್ಕೆ ಹಿನ್ನಡೆ ಉಂಟಾಗಿದೆ.
ಟಿಆರ್ ಎಸ್ ಸಂಸದ ಕೊಂಡ ವಿಶ್ವೇಶ್ವರ ರೆಡ್ಡಿ ಪಕ್ಷವನ್ನು ತೊರೆದಿದ್ದಾರೆ. ಚೆವೆಲ್ಲಾ ಕ್ಷೇತ್ರದ ಸಂಸದರಾಗಿದ್ದ ರೆಡ್ಡಿ ಪಕ್ಷದಲ್ಲಿನ ಕೆಲವು ನಡೆಯಿಂದ ತಮಗೆ ಅಸಮಾಧಾನ ಉಂಟಾಗಿದ್ದು ಈ ನಿಟ್ಟಿನಲ್ಲಿ ಪಕ್ಷವನ್ನು ತೊರೆದಿದ್ದಾಗಿ ಹೇಳಿದ್ದಾರೆ.
ಅಲ್ಲದೇ ಪಕ್ಷದ ಮುಖಂಡರಾಗಿರುವ ಚಂದ್ರಶೇಖರ್ ರಾವ್ ಅವರ ವಿರುದ್ಧವೂ ಅಸಮಾಧಾನ ವ್ಯಕ್ತಪಡಿಸಿದ ಅವರು ಈ ನಿರ್ಧಾರವನ್ನು ತೆಗೆದುಕೊಳ್ಳುವ ಮುನ್ನ ಸಾಕಷ್ಟು ಯೋಚಿಸಿದ್ದಾಗಿಯೂ ಕೂಡ ಹೇಳಿದ್ದಾರೆ.
ತಮ್ಮ ಸಿದ್ಧಾಂತಗಳು ಹೊಂದಾಣಿಕೆಯಾಗದ ಕಾರಣ ಪಕ್ಷವನ್ನು ತೊರೆದಿದ್ದಾಗಿಯೂ ಅವರು ಹೇಳಿದ್ದಾರೆ.
ತೆಲಂಗಾಣದಲ್ಲಿ ಮುಂದಿನ ಡಿಸೆಂಬರ್ 7 ರಂದು ಚುನಾವಣೆ ನಡೆಯುತ್ತಿದ್ದು ಡಿಸೆಂಬರ್ 11 ರಂದು ಫಲಿತಾಂಶ ಪ್ರಕಟವಾಗುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ